ಮ್ಯಾಪ್‌ ತೋರಿಸಿ ಭಾರತ ವರ, ಇರಾನ್‌ ಶಾಪ ಎಂದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

Public TV
1 Min Read
Israeli PM Benjamin Netanyahu holds 2 maps at UN shows India as Blessing and Iran as ‘Curse

ನ್ಯೂಯಾರ್ಕ್‌: ವಿಶ್ವಸಂಸ್ಥೆಯ (United Nations) ಭಾಷಣದಲ್ಲಿ ಇಸ್ರೆಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಭಾರತದ ನಕ್ಷೆ ತೋರಿಸಿ ವರ (Blessing) ಎಂದು ಹೇಳಿ ಹೊಗಳಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಜಮಿನ್ ನೆತನ್ಯಾಹು ಭಾಷಣ ಮಾಡಿದರು. ಈ ವೇಳೆ ಸೌದಿ ಅರೇಬಿಯಾ, ಜೋರ್ಡಾನ್, ಈಜಿಪ್ಟ್, ಸುಡಾನ್, ಭಾರತ ಮತ್ತು ಯುಎಇ ಸೇರಿದಂತೆ ಇಸ್ರೇಲ್‌ಗೆ ಸ್ನೇಹ ಪರವಾಗಿರುವ ದೇಶಗಳ ಚಿತ್ರವನ್ನು ತೋರಿಸಿ ʼವರʼ ಎಂದು ಬಣ್ಣಿಸಿದ್ದಾರೆ. ನಂತರ ಇರಾನ್‌,ಇರಾಕ್‌ ಸಿರಿಯಾ ಮ್ಯಾಪ್‌ ತೋರಿಸಿ ಶಾಪ (Curse) ಎಂದು ಹೇಳಿದ್ದಾರೆ.

ನೆತನ್ಯಾಹು ಅವರು ತಮ್ಮ ಭಾಷಣದಲ್ಲಿ, ಇರಾನ್ ಅನ್ನು ಬಹಳ ಸಮಯದವರೆಗೆ ಜಗತ್ತು ಸಮಾಧಾನದಿಂದ ನೋಡಿದೆ. ಆದರೆ ಅದರ ಆಂತರಿಕ ದಮನದ ವಿಚಾರದಲ್ಲಿ ಕುರುಡಾಗಿ ಬಾಹ್ಯ ಆಕ್ರಮಣ ನಡೆಸುತ್ತಿದೆ. ಈ ತುಷ್ಟೀಕರಣ ಕೊನೆಗೊಳ್ಳಬೇಕು ಮತ್ತು ಈಗಲೇ ಕೊನೆಯಾಗಬೇಕು ಎಂದು ಸಿಟ್ಟು ಹೊರಹಾಕಿದರು. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ

ಟೆಹರಾನ್‌ ನಿರಂಕುಶಾಧಿಕಾರಿಗಳಿಗೆ ನನ್ನ ಬಳಿ ಸಂದೇಶವಿದೆ. ನೀವು ನಮ್ಮನ್ನು ಹೊಡೆದರೆ, ನಾವು ನಿಮ್ಮನ್ನು ಹೊಡೆಯುತ್ತೇವೆ ಎಂದು ಗುಡುಗಿದರು.

ನೆತನ್ಯಾಹು ಅವರು ಹಿಡಿದ ವರ ನಕ್ಷೆಯು ಇಸ್ರೇಲ್ ಮತ್ತು ಅದರ ಅರಬ್ ಪಾಲುದಾರರ ನಡುವಿನ ಏಕತೆಯ ದೃಷ್ಟಿಯನ್ನು ವಿವರಿಸುತ್ತದೆ. ಹಿಂದೂ ಮಹಾಸಾಗರ ಮತ್ತು ಮೆಡಿಟರೇನಿಯನ್ ಸಮುದ್ರದ ನಡುವಿನ ಭೂ ಸೇತುವೆಯ ಮೂಲಕ ಏಷ್ಯಾ ಮತ್ತು ಯುರೋಪ್‌ನೊಂದಿಗೆ ಸಂಪರ್ಕಿಸುತ್ತದೆ.

Share This Article