ಟೆಲ್ ಅವೀವ್: ಗಾಜಾದಲ್ಲಿ (Gaza) ಇಸ್ರೇಲಿ ವಾಯುದಾಳಿ (Israeli Strikes) ಮತ್ತು ಗುಂಡಿನ ದಾಳಿಗೆ ಆಹಾರಕ್ಕಾಗಿ ಕಾಯುತ್ತಿದ್ದ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೇ, ದಕ್ಷಿಣ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ಮಲಗಿದ್ದಾಗ ರಾತ್ರಿಯ ಸಮಯದಲ್ಲಿ ಟೆಂಟ್ ಶಿಬಿರದ ಮೇಲೆ ನಡೆದ ದಾಳಿಗೆ ಮೃತರಾದವರ ಕುಟುಂಬಗಳು ಕಣ್ಣೀರಿಟ್ಟರು. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 13 ಸದಸ್ಯರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
ನಗರದ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡಿದ್ದ ಶಾಲೆಯ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ 15 ಜನರು ಸಾವನ್ನಪ್ಪಿದರು. ನೆರವು ಪಡೆಯುವ ವೇಳೆ ದಿನನಿತ್ಯದ ಗುಂಡಿನ ದಾಳಿಯಲ್ಲಿ ಹೆಚ್ಚಿನ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪುತ್ತಿದ್ದಾರೆಂದು ತಿಳಿಸಲಾಗಿದೆ.
ಗಾಜಾ ಪಟ್ಟಿಯ ಜನರಿಗೆ ಆಹಾರ ಒದಗಿಸಲು ಇಸ್ರೇಲ್ ಬೆಂಬಲದೊಂದಿಗೆ ಹೊಸದಾಗಿ ರಚಿಸಲಾದ ಅಮೆರಿಕನ್ ಸಂಘಟನೆಯಾದ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ ಕೆಲಸ ಮಾಡುತ್ತಿದೆ. ಫೌಂಡೇಶನ್‌ನಿಂದ ಆಹಾರ ವಿತರಣಾ ತಾಣಗಳಿಗೆ ಹೋಗುವ ರಸ್ತೆಗಳಲ್ಲಿ ಐದು ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್
ಗಾಜಾದ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ವಿಶ್ವಸಂಸ್ಥೆಯ ನೆರವು ಸಾಗಿಸುವ ಟ್ರಕ್‌ಗಳಿಗಾಗಿ ಕಾಯುತ್ತಿದ್ದಾಗ ಇನ್ನೂ 40 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
GHF ತಾಣಗಳನ್ನು ತಲುಪಲು ಪ್ರಯತ್ನಿಸುತ್ತಿರುವ ಪ್ಯಾಲೆಸ್ತೀನಿಯನ್ನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ನಿಯಮಿತವಾಗಿ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗಾಜಾದ ಮಿಲಿಟರಿ-ಚಾಲಿತ ವಲಯಗಳ ಬಳಿ ಜನರು ಗುಂಪುಗೂಡಿದ್ದಾಗ, UN ಟ್ರಕ್‌ಗಳು ಪ್ರವೇಶಿಸಲು ಮುಂದಾದಾಗ ಪಡೆಗಳು ಗುಂಡು ಹಾರಿಸುತ್ತಿವೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.