– ಕಳೆದ 24 ಗಂಟೆಯಲ್ಲಿ 266 ಮಂದಿ ದುರ್ಮರಣ
ಟೆಲ್ ಅವಿವ್: ಇಸ್ರೇಲ್ (Israel) ಸೋಮವಾರ ಮುಂಜಾನೆ ಗಾಜಾದ (Gaza) ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ (Southern Lebanon) ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ.
ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ (Hospital) ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್‌ಕ್ಲೇವ್‌ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು
ಇದಕ್ಕೂ ಮೊದಲು, ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು (Palestinians) ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ಇದನ್ನೂ ಓದಿ: ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ
ಎನ್‌ಕ್ಲೇವ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಾಜಾಪಟ್ಟಿಗೆ ಜಾಗತಿಕ ನೆರವು – ಪ್ಯಾಲೆಸ್ತೇನಿಗಳಿಗೆ ಆಶ್ರಯ ನೀಡದ ನೆರೆ ದೇಶಗಳು
ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ
Web Stories