ಬೆಂಗಳೂರು: ಚಂದ್ರಯಾನ (Chandrayaan-3) ಸಕ್ಸಸ್‌ಗಾಗಿ ದೇಶಾದ್ಯಂತ ಜನ ಪೂಜೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಇಸ್ರೋ ಅಧ್ಯಕ್ಷರು ಕೂಡ ಅಯ್ಯಪ್ಪ ಸ್ವಾಮಿ (Ayyappa Swamy) ದೇವರ ಮೊರೆ ಹೋಗಿದ್ದಾರೆ.
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanth) ಮಂಗಳವಾರ ಸಂಜೆ ಬೆಂಗಳೂರಿನ (Bengaluru) ಜಾಲಹಳ್ಳಿಯ (Jalahalli) ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಜೆ 5:30ರ ವೇಳೆಗೆ ಚಂದ್ರಯಾನ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಇತರೆ ವಿಜ್ಞಾನಿಗಳು ಸಹಾ ಪೂಜೆ ಸಲ್ಲಿಕೆ ಮಾಡಿದ್ದು, ಚಂದ್ರಯಾನ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮಣ್ಣಿಗೆ ಹೋಲಿಕೆಯಾಗುತ್ತಂತೆ ತಮಿಳುನಾಡಿನ ಮಣ್ಣು – ಚಂದ್ರಯಾನ-3ಗೂ ಇದೆ ಈ ಮಣ್ಣಿನ ಕೊಡುಗೆ; ಏನಿದರ ವಿಶೇಷತೆ?
ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆಯಾಗಿದೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ಪ್ರಾರ್ಥಿಸಿ ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಮಹಾರುಧ್ರಾಭಿಷೇಕ
ಕೌತುಕಭರಿತ ಲ್ಯಾಂಡಿಂಗ್ ಆಪರೇಷನ್ ಪ್ರಕ್ರಿಯೆಯನ್ನ ಇಸ್ರೋ ಇಂದು ಸಂಜೆ 5 ಗಂಟೆ 20 ನಿಮಿಷದಿಂದ ಲೈವ್ ಟೆಲಿಕಾಸ್ಟ್ ಮಾಡಲಿದೆ. ನಿಮ್ಮ ಪಬ್ಲಿಕ್ ಟಿವಿ ಕೂಡ ಚಂದ್ರ ಚುಂಬನದ ಕ್ಷಣಕ್ಷಣದ ಮಾಹಿತಿಯನ್ನು ವಿಶ್ಲೇಷಣೆ ಸಹಿತ ನಿಮಗೆ ಒದಗಿಸಲಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಮುಗಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಜೋಹನ್ಸ್‌ಬರ್ಗ್ ಪ್ರಧಾನಿ ಮೋದಿ ವರ್ಚೂವಲ್ ಆಗಿ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ಯೋಜನೆಗಳಿಗೆ ನೂರಾರು ಕೋಟಿ ವ್ಯಯ – ಭಾರತಕ್ಕೇನು ಲಾಭ?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]