ನವದೆಹಲಿ: ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಳುಹಿಸಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆ (Aditya L1) ಎರಡನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಇಸ್ರೋ ತಿಳಿಸಿದೆ.
ಸೆ.5 ರಂದು ಮಧ್ಯರಾತ್ರಿ 2:45 ಕ್ಕೆ ಆದಿತ್ಯ ಎಲ್1 ನೌಕೆ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: Aditya L1: ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ ನೌಕೆ – ಸೂರ್ಯನತ್ತ ಮತ್ತೊಂದು ಹೆಜ್ಜೆ
Advertisement
Aditya-L1 Mission:
The second Earth-bound maneuvre (EBN#2) is performed successfully from ISTRAC, Bengaluru.
ISTRAC/ISRO’s ground stations at Mauritius, Bengaluru and Port Blair tracked the satellite during this operation.
The new orbit attained is 282 km x 40225 km.
The next… pic.twitter.com/GFdqlbNmWg
— ISRO (@isro) September 4, 2023
Advertisement
ಆದಿತ್ಯ ಎಲ್1 ನೌಕೆಯು ಸೆ.10 ರಂದು ರಾತ್ರಿ 2:30 ಕ್ಕೆ ಮೂರನೇ ಕಕ್ಷೆಯನ್ನು ಪ್ರವೇಶಿಸಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಸೆ.3 ರಂದು ನೌಕೆಯು ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಬದಲಾಯಿಸಿತ್ತು.
Advertisement
ಸೂರ್ಯನ ಅಧ್ಯಯನಕ್ಕಾಗಿ ‘ಆದಿತ್ಯ ಎಲ್1’ ಬಾಹ್ಯಾಕಾಶ ನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಸೆ.2 ರಂದು ಉಡಾವಣೆ ಮಾಡಿತು. ಭಾರತದ ಮೊದಲ ಸೌರ ವೀಕ್ಷಣಾಲಯವನ್ನು ಸೂರ್ಯ ಮತ್ತು ಭೂಮಿ ನಡುವಿನ L1 ಪಾಯಿಂಟ್ನಲ್ಲಿ ಇರಿಸುವ ಮೂಲಕ ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಗುರಿಯನ್ನು ಈ ಮಿಷನ್ ಹೊಂದಿದೆ. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ
Advertisement
L1 ಎಂದರೆ ಲಾಗ್ರೆಂಜ್ ಪಾಯಿಂಟ್ 1. ಅಲ್ಲಿ ಬಾಹ್ಯಾಕಾಶ ನೌಕೆಯನ್ನು ನಿಲ್ಲಿಸಲಾಗುತ್ತದೆ. ISRO ಪ್ರಕಾರ, ಆದಿತ್ಯ-L1 ಭೂಮಿಯಿಂದ ಸರಿಸುಮಾರು 15 ಕಿ.ಮೀ ದೂರದಲ್ಲಿ ಸೂರ್ಯನ ಕಡೆಗೆ ನಿಂತು ಅಧ್ಯಯನ ನಡೆಸಲಿದೆ. ಈ ಪಾಯಿಂಟ್ ಭೂಮಿಯಿಂದ ಸೂರ್ಯನಿಗೆ ಇರುವ ದೂರದ 1% ಭಾಗದಷ್ಟಿದೆ.
Web Stories