ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (International Space Station) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗುತ್ತಿದ್ದಾರೆ.
ಜೂ.25ರಂದು ಆಕ್ಸಿಯಂ-4 (Axiom-4) ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ.ಇದನ್ನೂ ಓದಿ:ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ
ಸದ್ಯ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಮರಳುತ್ತಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿದೆ. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಲಿದ್ದು, ನಾಳೆ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಬಂದಿಳಿಯಲಿದ್ದಾರೆ.
ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸಾಫ್ಟ್ಲ್ಯಾಂಡ್ ಮಾಡಲಾಗುತ್ತದೆ. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟೆçಚ್ಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ.
#Ax4 from @Axiom_Space aboard the @SpaceX Dragon undocked from the station’s Harmony module at 7:15am ET today completing a two-and-a-half week space research mission. More… https://t.co/ySAggkxJcY pic.twitter.com/JLEr72KgHp
— International Space Station (@Space_Station) July 14, 2025
ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.ಇದನ್ನೂ ಓದಿ: ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್