ಬೆಂಗಳೂರು: ಅನರ್ಹ ಶಾಸಕರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಬಿಜೆಪಿ ಸರ್ಕಾರ ಅಕ್ರಮ ಸರ್ಕಾರ ಎಂಬುದು ಸಾಬೀತಾಗಿದೆ. ಅದನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷರು, ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಪಕ್ಷಾಂತರಗೊಂಡ ಎಲ್ಲ 17 ಶಾಸಕರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕರ್ನಾಟಕ ಬಿಜೆಪಿ ಸರ್ಕಾರ ಅಕ್ರಮ ಸರ್ಕಾರ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಬಹುಮತವನ್ನು ರೂಪಿಸಲು ಬಿಜೆಪಿ ಅಸಂವಿಧಾನಿಕ ವಿಧಾನಗಳನ್ನು ಬಳಸಿಕೊಂಡಿದೆ. ಬಿಜೆಪಿ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಎರಡು ದಿನಗಳಲ್ಲಿ ಅನರ್ಹರು ಬಿಜೆಪಿಗೆ ಸೇರ್ಪಡೆ
Advertisement
Supreme Court has upheld the disqualification of all the 17 MLA’s who defected from @INCIndia & JDS.
It also proves that the Karnataka BJP govt is an illegal govt.@BJP4India had used unconstitutional means to fabricate a majority. It should be immediately dismissed.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 13, 2019
Advertisement
ಅನರ್ಹ ಶಾಸಕರ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಮೈತ್ರಿ ಸರ್ಕಾರ ಬೀಳಿಸುವಲ್ಲಿ ಬಿಜೆಪಿ ಕೈವಾಡ ಈಗ ಸ್ಪಷ್ಟವಾಗಿದೆ. ಇದರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬಾರದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ರಾಜಕೀಯ ಭವಿಷ್ಯ ಮುಗಿಯುತ್ತೆ ಎಂದವರಿಗೆ ಸುಪ್ರೀಂ ಆದೇಶವೇ ತಕ್ಕ ಉತ್ತರ – ವಿಶ್ವನಾಥ್
Advertisement
ಸುಪ್ರೀಂ ಕೋರ್ಟಿನಿಂದ ಇಂದು ತೀರ್ಪು ಹೊರಬಿದ್ದಿದ್ದು, 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ.
Advertisement
I welcome the #SupremeCourt verdict.
The hand of BJP in toppling the coalition govt is now clear.
The involvement of @BSYBJP & @AmitShah is now proved.
If BJP has any morality left, they should not give tickets to these disqualified MLA’s to contest.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 13, 2019
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.
ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ತೀರ್ಪಿನಿಂದ ನನಗೆ ಭಾಗಶಃ ಸಂತೋಷವಾಗಿದೆ. ನನ್ನ ಅಭಿಪ್ರಾಯವನ್ನು ಮಾನ್ಯ ಮಾಡಿದ್ದು ತೃಪ್ತಿ ತಂದಿದೆ. ಮೇಲ್ಮನವಿ ಸಲ್ಲಿಸಬೇಕೇ ಬೇಡವೇ ಎನ್ನುವ ನಿರ್ಧಾರವನ್ನು ನಾನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ತೀರ್ಮಾನದ ಮೇಲೆ ನಿಂತಿದೆ ಎಂದು ತಿಳಿಸಿದ್ದಾರೆ.
ಅನರ್ಹತೆ ಎನ್ನುವುದೇ ಒಂದು ಕಳಂಕ. ನಾನು ನಿಯಮದ ಪ್ರಕಾರವೇ ವಿಧಾನಸಭೆ ಮುಗಿಯುವರೆಗೆ ಅನರ್ಹತೆ ಮಾಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ.