ಬೆಂಗಳೂರು: ನಗರದ ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ನಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಕುರಿತು ಅವಿನಾಶ್ ಸದಸ್ಯತ್ವ ಹೊಂದಿದ್ದ ಕ್ಲಬ್ ಗಳಲ್ಲಿ ಐಟಿ ಮತ್ತು ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ.
ನಗರದ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಸದಸ್ಯತ್ವ ಹೊಂದಿರುವ ಅವಿನಾಶ್ ಅಮರಲಾಲ್, ಬೆಂಗಳೂರು ಕ್ಲಬ್ ಸೇರಿದಂತೆ ಕೆಲವು ಪ್ರತಿಷ್ಠಿತ ಕ್ಲಬ್ ಗಳಲ್ಲಿ ಸದಸ್ಯತ್ವ ಹೊಂದಿದ್ದಾರೆ. ಹಾಗಾಗಿ ಮತ್ತಷ್ಟು ಆಕ್ರಮ ಹಣ ಇದೇ ರೀತಿ ಕ್ಲಬ್ ಗಳಲ್ಲಿ ಶೇಖರಿಸಿಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಐಟಿ ಹಾಗೂ ಇಡಿ ಅಧಿಕಾರಿಗಳು ಶನಿವಾರ ಅವಿನಾಶ್ ಸದಸ್ಯತ್ವ ಹೊಂದಿರುವ ಕ್ಲಬ್ ಗಳ ಮಾಹಿತಿ ಸಂಗ್ರಹಿಸಿದ್ದಾರೆ.
Advertisement
ಉದ್ಯಮಿ ಅವಿನಾಶ್ ಅಮರ್ ಲಾಲ್, ನಗರದ ಟೆನಿಸ್ ಕೋರ್ಟ್ ನಲ್ಲಿ ಕಳೆದ 1 ವರ್ಷದಿಂದ ನಿಧಿಯನ್ನು ಬಚ್ಚಿಟ್ಟಿದ್ದರು. ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ ಅವರು ಬಚ್ಚಿಟ್ಟಿದ್ದ ಲಾಕರ್ ಓಪನ್ ಮಾಡಿದ್ದಾರೆ. 2 ಲಾಕರ್ ಓಪನ್ ಮಾಡಿದ್ದು, ಅದರಲ್ಲಿ 2 ಬ್ಯಾಗ್ ಪತ್ತೆಯಾಗಿದೆ. ಈ 2 ಬ್ಯಾಗಿನಲ್ಲಿ ಸುಮಾರು 3.90 ಕೋಟಿ ನಗದು, 5 ಕೋಟಿ ಮೌಲ್ಯದ ವಜ್ರಾಭರಣ ಮತ್ತು 100ಕೋಟಿ ರೂ. ಆಸ್ತಿ ಪತ್ರ ಪತ್ತೆಯಾಗಿತ್ತು.
Advertisement
ಸಿಕ್ಕಿಬಿದ್ದಿದ್ದು ಹೇಗೆ?
ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ 15 ದಿನಗಳ ಹಿಂದೆ, ನೀವು ಲಾಕರ್ ನಲ್ಲಿ ಇಟ್ಟಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಹೋಗಿ ಒಂದು ವೇಳೆ ಲಾಕರ್ ನಲ್ಲಿರುವ ವಸ್ತು ಕೊಂಡೊಯ್ಯದಿದ್ದರೆ ಲಾಕರ್ ಒಡೆಯುದಾಗಿ ಉದ್ಯಮಿಗೆ ನೋಟಿಸ್ ಕಳುಹಿಸಿರುತ್ತಾರೆ. ಸ್ವಲ್ಪ ಕೆಲಸ ಕಾರ್ಯಗಳಿವೆ. ಆದ್ದರಿಂದ ಅವುಗಳನ್ನು ಒಡೆದು ನವೀಕರಣಗೊಳಿಸಬೇಕಿದೆ ಎಂದು ಬೌರಿಂಗ್ ಆಡಳಿತ ಮಂಡಳಿ ತಿಳಿಸುತ್ತದೆ. ಆದರೆ ಉದ್ಯಮಿ ನೋಟಿಸ್ ಬಗ್ಗೆ ತಲೆ ತಲೆಕೆಡಿಸಿಕೊಂಡಿಲ್ಲ. ಕೊನೆಗೆ ಆಡಳಿತ ಮಂಡಳಿ 86, 87ರಲ್ಲಿ ಲಾಕರ್ ಹೊಡೆದಿದೆ. ಆಗ ಈ ಕೋಟಿ ಕೋಟಿ ಆಸ್ತಿ ಪತ್ತೆಯಾಗಿತ್ತು.
Advertisement
Advertisement
ಅವಿನಾಶ್ ಅಮರ್ಲಾಲ್ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರನಾಗಿದ್ದು, ಮೂಲತಃ ರಾಜಸ್ಥಾನದವನು ಎಂದು ತಿಳಿದು ಬಂದಿದೆ. ಜೊತೆಗೆ ಬೆಂಗಳೂರಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದು, 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದರು. ಸಾಲ ಕೊಟ್ಟು ಆಸ್ತಿ ಪತ್ರಗಳನ್ನು ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಈ ಬಗ್ಗೆ ಐಟಿ ಇಲಾಖೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.