‘ಪುಷ್ಪ’ (Pushpa) ಸೇರಿದಂತೆ ತೆಲುಗಿನ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮೈತ್ರಿ ಮೂವಿ ಮೇಕರ್ಸ್ (Mytri Movie Makers) ನಿರ್ಮಾಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದೆ. ಮೈತ್ರಿ ಮೂವೀಸ್ ಕಚೇರಿ, ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಸತತ ಐದು ದಿನಗಳಿಂದಲೂ ದಾಳಿ, ಪರಿಶೀಲನೆ ನಡೆಯುತ್ತಲೇ ಇದ್ದು, ಶನಿವಾರದಂದು (ಏ.22) ತನಿಖೆ ವೇಳೆ ನಿರ್ಮಾಪಕ ನವೀನ್ ಯೆರ್ರಿನೇನಿ ಕುಸಿದು ಬಿದ್ದಿದ್ದರು.
Advertisement
ಸತತ ಐದು ದಿನಗಳಿಂದ ನಡೆದ ಶೋಧ ಕಾರ್ಯದಲ್ಲಿ ಅವ್ಯವಹಾರಗಳು ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಜಿಎಸ್ ಟಿ, ಐಟಿ ಹೀಗೆ ತೆರಿಗೆ ವಿಚಾರದಲ್ಲಿ ಯಾವುದೇ ಸುಳ್ಳು ಲೆಕ್ಕವನ್ನು ನೀಡಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಐಟಿ ರೇಡ್ ಆದ ಬೆನ್ನಲ್ಲೇ ನಿರ್ಮಾಪಕ ನವೀನ್ ಯೆರ್ರಿನೇನಿ (Naveen Yerrineni) ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನವೀನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐದು ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಿನಿಮಾಗಳ ಮೇಲೆ ಹೂಡಿಕೆಗೆ ಅಕ್ರಮವಾಗಿ 700 ಕೋಟಿ ಹಣವನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ಮೈತ್ರಿ ಮೂವಿ ಮೇಕರ್ಸ್ ಮೇಲಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಐಟಿ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗುತ್ತಿದೆ.
Advertisement
Advertisement
ಅಲ್ಲು ಅರ್ಜುನ್ -ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ ಸಿನಿಮಾ ಸಕ್ಸಸ್ ಬಳಿಕ ಪುಷ್ಪ 2, ವಿಜಯ್ ದೇವರಕೊಂಡ-ಸಮಂತಾ ನಟನೆಯ ಖುಷಿ, ಮಲಯಾಳಂನಲ್ಲಿ ನಟಿಗರ್ ತಿಲಗಂ, ಪವನ್ ಕಲ್ಯಾಣ್ ನಟನೆಯ ಭಗತ್ ಸಿಂಗ್, ಎನ್‌ಟಿಆರ್-ಪ್ರಶಾಂತ್ ನೀಲ್ ಕಾಂಬಿನೇಶನ್ ಸಿನಿಮಾ, ರಾಮ್ ಚರಣ್ ನಟನೆಯ 16ನೇ ಸಿನಿಮಾ. ಅಲ್ಲು ಅರ್ಜುನ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್ ಸಿನಿಮಾಗಳನ್ನು ಒಟ್ಟೊಟ್ಟಿಗೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:38 ಕೋಟಿ ರೂಪಾಯಿ ಕೊಟ್ಟು ಎರಡು ಐಷರಾಮಿ ಮನೆ ಖರೀದಿಸಿದ ಆಲಿಯಾ ಭಟ್
Advertisement
ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿತ್ತು.
ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಐಟಿ ದಾಳಿ ಬೆನ್ನಲ್ಲೇ ಏನೆಲ್ಲ ಸಿಕ್ಕಿದೆ ಎನ್ನುವ ಕುರಿತು ಈವರೆಗೂ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.