ಬೆಂಗಳೂರು: ಚಿತ್ರನಟ ದರ್ಶನ್ (Actor Darshan) ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ (Renukaswamy) ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಇದನ್ನೂ ಓದಿ: ಗೇಮಿಂಗ್ ಝೋನ್‍ನಲ್ಲಿ ಅಗ್ನಿ ದುರಂತ – ಪುರಸಭೆ ಆಯುಕ್ತರು ನಿದ್ರಿಸುತ್ತಿದ್ದಾರೆ: ಹೈಕೋರ್ಟ್ ಚಾಟಿ
ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್ ವಾರಂಟ್ ಜಾರಿ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!
ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಹೋದರಿಗಾಗಿ ಆರ್ಡರ್ ಮಾಡಿದ್ದ ಐಸ್‍ಕ್ರೀಮ್‍ನಲ್ಲಿತ್ತು ಮನುಷ್ಯನ ಕೈಬೆರಳು – ಮುಂದೇನಾಯ್ತು?