ಬೆಳಗಾವಿ: ಪಾಕಿಸ್ತಾನದ (Pakistan) ವಿರುದ್ಧ ಯುದ್ಧದ ಅವಶ್ಯಕತೆ ಇಲ್ಲ ಎಂದಿರುವ ಸಿದ್ದರಾಮಯ್ಯ (Siddaramaiah) ಪಾಕಿಸ್ತಾನಕ್ಕೆ ಶಿಫ್ಟ್ ಆಗೋದು ಒಳ್ಳೆದು ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆ ನೀಡಿದ್ದಾರೆ.
ಯುದ್ಧದ ಅವಶ್ಯಕತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದಾರೆ. ಉಗ್ರರು 28 ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದಕ್ಕೆ ಸರಿಯಾದ ಪಾಠ ಕಲಿಸಿ ಎಂದು ಜನ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. ಜನರ ಭಾವನೆ, ಆಕ್ರೋಶ ಇರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಠಿಕರಣ ಬೋಧನೆ ಆರಂಭ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಲವು ನಿರ್ಧಾರ ಕೈಗೊಂಡಿದೆ. ಯಾವ ಸಂದರ್ಭದಲ್ಲಿ ಯಾವ ನಿರ್ಧಾರ ಆಗಬೇಕು ಅದನ್ನು ಕೇಂದ್ರ ಮಾಡುತ್ತಿದೆ. ಅಧಿಕೃತವಾಗಿ ಕೇಂದ್ರ ಸರ್ಕಾರ ಯುದ್ಧ ಘೋಷಣೆ ಮಾಡಿಲ್ಲ. ಈ ಸಂದರ್ಭದಲ್ಲಿ ಕೀಳು ಮಟ್ಟದ ಹೇಳಿಕೆಯನ್ನು ಸಿಎಂ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನಾರ್ಹ. ಯುದ್ಧ ಮಾಡೋದು, ಬಿಡೋದು ಕೇಂದ್ರಕ್ಕೆ ಬಿಟ್ಟಿದ್ದು. ಈ ಹೇಳಿಕೆ ದೇಶಕ್ಕೆ ಅಪಮಾನ ಮಾಡುವ ಹೇಳಿಕೆ ಎಂದು ಹರಿಹಾಯ್ದರು. ಇದನ್ನೂ ಓದಿ: Anytime, Anywhere – ಬ್ರಹ್ಮೋಸ್ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ
ಇದಕ್ಕೆ ಸರಿಯಾದ ಉತ್ತರ ಕೊಡಬೇಕಾದ ಸಮಯ ಬಂದಿದೆ. ಅಟ್ಯಾಕ್ ಮಾಡದೇ ಇದ್ದರೆ ಇದು ಮರುಕಳಿಸಲಿದೆ. ಸಣ್ಣ ವಿಚಾರವನ್ನು ಅರ್ಥ ಮಾಡಿಕೊಳ್ಳದ ಸಿಎಂ ನಮ್ಮಲ್ಲಿ ಇದ್ದಾರೆ. ಎಐಸಿಸಿ ಅಧ್ಯಕ್ಷರು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಸಿಎಂ ಅಲ್ಪಸಂಖ್ಯಾತರ ತುಷ್ಠಿಕರಣಕ್ಕಾಗಿ ಕೀಳು ಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಪಾಕಿಸ್ತಾನದ ಟಿವಿ ಮಾಧ್ಯಮಗಳಲ್ಲಿ ಸಿದ್ದರಾಮಯ್ಯ ಹೆಸರು ಬರುತ್ತಿದೆ. ಪಾಕಿಸ್ತಾನದಲ್ಲಿ ಪಾಪ್ಯುಲರ್ ಆಗಲು ಸಿದ್ದರಾಮಯ್ಯ ಹೊರಟ್ಟಿದ್ದಾರೆ. ಅವರು ಪಾಕಿಸ್ತಾನಕ್ಕೆ ಹೋದರೆ ಒಳ್ಳೆಯದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Kolar | ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ – ಓರ್ವ ಆರೋಪಿ ಬಂಧನ