– 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿಯ ಪ್ರಮುಖ ಗುರಿ

ಹುಬ್ಬಳ್ಳಿ: ಬಿಜೆಪಿಯ (BJP) ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಎಂ.ನಾಗರಾಜ್ (M. Nagaraj) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಈ ಜವಾಬ್ದಾರಿ ಸಿಕ್ಕಿರುವುದು ಸಂತಸ ತಂದಿದೆ ಎಂದಿರುವ ಅವರು, 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿಯ ಪ್ರಮುಖ ಗುರಿ ಎಂದು ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿಂದುಳಿದ ವರ್ಗಗಳಿಗೆ ಈ ಜವಾಬ್ದಾರಿ ಸಿಕ್ಕಿದೆ ಎಂದು ಭಾವಿಸುತ್ತೇನೆ. ತಮ್ಮ ನೇಮಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಎಲ್ಲಾ ಜನಾಂಗಗಳ ಪರವಾಗಿ ಧನ್ಯವಾದ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಿತಿನ್ ನಬಿನ್ ಹೊಸ ತಂಡ ರಚನೆ – ರಾಷ್ಟ್ರೀಯ ಉಪಾಧ್ಯಕ್ಷ ಪಟ್ಟಕ್ಕೆ ರಾಜ್ಯದ ನಾಗರಾಜ, ಸ್ಮೃತಿ ಇರಾನಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ
2028ರ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಬಿಜೆಪಿಯ ಗುರಿಯಾಗಿದ್ದು, ಚುನಾವಣಾ ಫಲಿತಾಂಶವೇ ನಮ್ಮ ಚಾಲೆಂಜ್ ಎಂದು ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಕರ್ನಾಟಕವನ್ನು ಬಿಜೆಪಿಯ ಕೈತಪ್ಪದಂತೆ ನೋಡಿಕೊಳ್ಳುವುದು ನಮ್ಮ ಗುರಿ. ಜನರು ಬಿಜೆಪಿಗೆ ಮತ ನೀಡಲು ಸಿದ್ಧರಾಗಿದ್ದಾರೆ, ಅವರೊಂದಿಗೆ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುವುದಾಗಿ ನಾಗರಾಜ್ ಹೇಳಿದ್ದಾರೆ. ನೂತನ ರಾಷ್ಟ್ರೀಯ ಜವಾಬ್ದಾರಿಯ ಬೆನ್ನಲ್ಲೇ 2028ರ ಕರ್ನಾಟಕ ಚುನಾವಣೆಯ ಗುರಿ ಘೋಷಿಸಿರುವ ನಾಗರಾಜ್, ರಾಜ್ಯದಲ್ಲಿ ಬಿಜೆಪಿ ಸಂಘಟನೆ ಬಲಪಡಿಸುವ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್
