ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ (Bommai Tweet) ಮಾಡಿರುವ ಬೊಮ್ಮಾಯಿ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಭೇಟಿಯಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಪರೋಕ್ಷವಾಗಿ ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ.
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು…
— Basavaraj S Bommai (@BSBommai) June 14, 2023
ಟ್ವೀಟ್‍ನಲ್ಲೇನಿದೆ..?: ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಅಡ್ಜಸ್ಟ್‌ಮೆಂಟ್ ರಾಜಕಾರಣ: ಸ್ವಪಕ್ಷೀಯರ ವಿರುದ್ಧವೇ ಪ್ರತಾಪ್ ಸಿಂಹ ಅಸಮಾಧಾನ
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಪ್ರತಾಪ್ ಸಿಂಹ ಆರೋಪವೇನು..?: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯ ವಿರುದ್ದ ರೀ ಡೂ, ಅರ್ಕಾವತಿ ಡಿ ನೋಟಿಫೀಕೇಷ್, ಕೆಂಪಣ್ಣ ಆಯೋಗ ವರದಿ ಅಬ್ಬರಿಸುತ್ತಿತ್ತು. ಆದರೆ ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಹರಿಹಾಯ್ದಿದ್ದರು.
ಸಿದ್ದರಾಮಯ್ಯ ಕೂಡ ಬಿಜೆಪಿ ಮೇಲೆ ಪಿಎಸ್‍ಐ ಹಗರಣ, ಬಿಟ್ ಕಾಯಿನ್ ಅಂತಾ ಅಬ್ಬರಿಸುತ್ತಿದ್ದರು. ಈಗ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯ ಅವರೆ, ನಿಗಮ ಬಿಜೆಪಿಯ ಕೆಲ ನಾಯಕರ ಜೊತೆ ಹೊಂದಾಣಿಕೆ ಇಲ್ಲ ಅಂದರೆ, ನೀವು ಮಾಡ್ತಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶ ಮಾಡಿ ಎಂದು ಆಗ್ರಹಿಸಿದ್ದರು. ನಿಮ್ಮ ವಿರುದ್ಧ ಅವರು, ಅವರ ವಿರುದ್ಧ ನೀವು ಸಮಯ ಬಂದಾಗ ಮಾತ್ರ ಟೀಕೆ ಮಾಡಿಕೊಳ್ತಿರಾ? ನನಗೆ ತುರಿಕೆ ಆದಾಗ ನೀನು ನನ್ನ ಬೆನ್ನು ಕೆರಿ, ನಿನಗೆ ತುರಿಕೆ ಆದಾಗ ನಾನು ಬೆನ್ನು ಕೆರಿತೀನಿ ಅನ್ನೋ ರೀತಿ ನಿಮ್ಮ ಒಪ್ಪಂದವೇ ಎಂದು ಪ್ರಶ್ನಿಸಿದ್ದರು.
ಒಟ್ಟಿನಲ್ಲಿ ಪ್ರತಾಪ್ ಸಿಂಹ ಹೇಳಿಕೆ ಬೆನ್ನಲ್ಲೇ ಬೊಮ್ಮಾಯಿ- ಶಾಮನೂರು ಶಿವಶಂಕರಪ್ಪ ಭೇಟಿ ಸದ್ದು ಮಾಡಿದ್ದು, ಇದೀಗ ಬೊಮ್ಮಾಯಿ ಸ್ಪಷ್ಟನೆ ನೀಡುವ ಮೂಲಕ ಊಹಾಪೋಹಗಳಿಗೆ ಫುಲ್‍ಸ್ಟಾಪ್ ಹಾಕಿದ್ದಾರೆ.