ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ. ಹೊಸ ಸಂಸತ್ ಭವನದಲ್ಲಿ ನಡೆಯುವ ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ ಎಂಬುದು ತಿಳಿದುಬಂದಿದೆ.
ಈ ನಡುವೆಯೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi), ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದಿದ್ದಾರೆ. ಸಂಸತ್ತಿಗೆ ಪ್ರವೇಶಿಸುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮೀಸಲಾತಿ ಬಿಲ್ ನಮ್ಮದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್
ಈ ಕುರಿತು ಮಾತನಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಕೇಂದ್ರ ಸಚಿವ ಸಂಪುಟದ ವರದಿಯ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ. ವಿಶೇಷ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲೇ ಈ ಬಗ್ಗೆ ಚೆನ್ನಾಗಿ ಚರ್ಚಿಸಬಹುದಿತ್ತು. ಗೌಪ್ಯತೆಯೊಂದಿಗೆ ಕೆಲಸ ಮಾಡುವ ಬದಲು ಒಮ್ಮತದ ನಿರ್ಧಾರ ಕೈಗೊಳ್ಳಬಹುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮತ್ತೊಬ್ಬ ನಾಯಕ ಪಿ.ಚಿದಂಬರಂ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಜಯ ಸಿಕ್ಕಂತಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್ ಬಗ್ಗೆ ಯತೀಂದ್ರ ಮಾಹಿತಿ
ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು. ಆ ನಂತರ 2010ರ ಮಾರ್ಚ್ 9 ರಂದು ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಈ ಮಸೂದೆಯನ್ನ ಅಂಗೀಕರಿಸಲಾಗಿತ್ತು. ಆದ್ರೆ ಲೋಕಸಭೆಯಲ್ಲಿ ಕೈಬಿಡಲಾಗಿತ್ತು.
Web Stories