ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್, ಇವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಸಿಕ್ಕು ಒದ್ದಾಡುತ್ತಿದ್ದೇವೆ ಎಂಬ ಸಚಿವ ಹೆಚ್.ಸಿ ಬಾಲಕೃಷ್ಣ ಬಹಿರಂಗ ಹೇಳಿಕೆ ವಿಚಾರದ ಕುರಿತು ಚನ್ನಪಟ್ಟಣದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆಗೂ ಮುನ್ನ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಕಮಿಟ್ಮೆಂಟ್ ಪೂರೈಸುವುದು ಸರ್ಕಾರದ ಕರ್ತವ್ಯ. ಗ್ಯಾರಂಟಿಗಳ ಜೊತೆಗೆ ಜನರಿಗೆ ಹೊಸ ಹೊಸ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಸರ್ಕಾರಿ ಬೊಕ್ಕಸ ಖಾಲಿಯಾಗಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಅವರು, ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಲ್ಲ. ಬೊಕ್ಕಸ ಖಾಲಿಯಾಗಿದ್ದರೆ ಕರಾವಳಿ ಅಭಿವೃದ್ಧಿಗೆ 35 ಸಾವಿರ ಕೋಟಿ ರೂ. ಅನುದಾನ ನೀಡಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಾವೇರಿ ಜಿಲ್ಲಾಸ್ಪತ್ರೆಯ ಕ್ಯಾಂಟೀನ್‌ನಲ್ಲಿ ಕರ್ಮಕಾಂಡ – ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಇನ್ನೂ ರಾಜ್ಯದಲ್ಲಿ ಅಹಿಂದ ಸಂಘಟನೆ ವೀಕ್ ಆಗ್ತಿದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಹಿಂದ ಸಂಘಟನೆ ಎನ್ನುವುದು ಪಕ್ಷಾತೀತ. ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯಗಳಿಗೆ ಶಕ್ತಿ ತುಂಬುವುದೇ ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತವಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಅಹಿಂದ ವೀಕ್ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಎಂ ಡಿ.ಕೆ. ಶಿವಕುಮಾರ್ ಕೂಡ ತಾವೂ ಅಹಿಂದ ಎಂದು ಹೇಳಿದ್ದಾರೆ. ಚುನಾವಣೆ ಹತ್ತಿರ ಬಂದಾಗ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಿ ಬೃಹತ್ ಅಹಿಂದ ಸಮಾವೇಶ ಮಾಡ್ತೇವೆ ಎಂದಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಬರ ತಾಂಡವ – ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

