ಬೆಂಗಳೂರು: ಜಿ.ಟಿ ದೇವೇಗೌಡರಿಗೆ (GT Devegowda) ಅಸಮಾಧಾನ ಇರೋದು ಸತ್ಯ. ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತನಾಡಿದರೆ ಎಲ್ಲವೂ ಸರಿ ಆಗಲಿದೆ ಎಂದು ಜೆಡಿಎಸ್ (JDS) ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ತಿಳಿಸಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಜಿಟಿ ದೇವೇಗೌಡ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿಟಿ ದೇವೇಗೌಡರಿಗೆ ಅಸಮಾಧಾನ ಇರೋದು ನಿಜ. ಅವರಿಗೆ ಸ್ಥಾನಮಾನದ ಬಗ್ಗೆ ಅಸಮಾಧಾನ ಇದೆ ಎಂದರು. ಇದನ್ನೂ ಓದಿ: ನಾಳೆ ಮಹಾರಾಷ್ಟ್ರ ಬಿಜೆಪಿ, ಶಿವಸೇನೆ, ಎನ್‌ಸಿಪಿ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ
ಇವತ್ತು ನಾನು ಸುದ್ದಿಗೋಷ್ಠಿಗೆ ಬರಲು ಹೇಳಿದ್ದೆ, ಅವರು ಬರಲಿಲ್ಲ. ಚನ್ನಪಟ್ಟಣ ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆ ಬರುವಂತೆ ದೇವೇಗೌಡ ಕರೆ ಮಾಡಿದ್ದು ನಿಜ. ಆದರೆ ಅವರು ಬರಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಿಜೆಪಿಗೆ ಸಿಎಂ ಪಟ್ಟ ಕೊಟ್ಟ ಶಿಂಧೆ – ಫಡ್ನಾವೀಸ್ ಮುಂದಿನ ಮುಖ್ಯಮಂತ್ರಿ?