ಮೈಸೂರು: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಯತ್ನಿಸಿದ್ದು ನಿಜ. ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸಿದ್ದರಾಮಯ್ಯ ಹತ್ಯೆಗೆ ಮಡಿಕೇರಿಯಲ್ಲಿ ಪ್ಲ್ಯಾನ್ ಆಗಿತ್ತು. ಸಿದ್ದರಾಮಯ್ಯ ಅವರ ಮೇಲೆ ಬಟನ್ ಚಾಕು ಎಸೆದಿದ್ದರು. ಬಟನ್ ಚಾಕು ಎಸೆದಾಗ ಕಾರಿನ ಗ್ಲಾಸ್ ಮುಚ್ಚಿತ್ತು. ಇಲ್ಲದೇ ಇದ್ದಿದ್ರೆ ಸಿದ್ದರಾಮಯ್ಯ ಕುತ್ತಿಗೆಗೇ ಚಾಕು ತಗಲುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸೆ. 8ಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ: ಸುಧಾಕರ್
ಬಟನ್ ಚಾಕು ಎಸೆದ ವಿಚಾರವನ್ನು ಕೊಡಗಿನ ಎಸ್‌ಪಿ ಗಮನಕ್ಕೆ ತಂದಿದ್ದೇನೆ. ಅವರು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ಪರಿಶೀಲಿಸಲು ಕೊಡಗು ಜಿಲ್ಲೆಗೆ ತೆರಳಿದ್ದರು. ಇದೇ ವೇಳೆ ತಿತಿಮತಿ ಮಾರ್ಗಮಧ್ಯೆ ಅವರ ಕಾರನ್ನು ಅಡ್ಡಗಟ್ಟಿದ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ, ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಎಸೆದಿದ್ದರು. ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟ ನಂತರ ಸಿದ್ದರಾಮಯ್ಯ ಅವರು ತೆರಳುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿತ್ತು. ಇದನ್ನೂ ಓದಿ: ಮೊಟ್ಟೆ ಎಸೆದವ ಕಾಂಗ್ರೆಸ್ ಕಾರ್ಯಕರ್ತ ಅಲ್ಲ; ನಾವು ಸಾಕ್ಷ್ಯ ಬಿಡುಗಡೆ ಮಾಡಿದ್ದೇವೆ – ಮಿಥುನ್ ಗೌಡ
ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯರನ್ನು ಹತ್ಯೆ ಮಾಡಲು ಬಟನ್ ಚಾಕು ಅನ್ನೂ ಎಸೆಯಲಾಗಿದೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
Live Tv