ಚಾಮರಾಜನಗರ: ನಾನು ಮುಂದಿನ ಸಿಎಂ ಎಂಬ ಅಭಿಮಾನಿಗಳ ಆಶಯದ ವಿಚಾರವಾಗಿ ನನಗೆ ಖುಷಿಯೂ ಆಗುತ್ತದೆ, ನೋವು ಆಗುತ್ತದೆ ಎಂದು ಸಚಿವ ಸೋಮಣ್ಣ (V.Somanna) ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ನಾನು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇದನ್ನು ಮತ್ತೆ ಮತ್ತೆ ಹೇಳಿ ನನಗೆ ಶತ್ರುಗಳನ್ನು ಹೆಚ್ಚಿಸಬೇಡಿ. ಮುಂದೆ ಸಿಎಂ ಯಾರಾಗಬೇಕು ಎಂಬುದನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (B.S Yediyurappa) ಮತ್ತು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮತದಾನ ಬಹಿಷ್ಕಾರದ ಎಚ್ಚರಿಕೆ ಬೆನ್ನಲ್ಲೇ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ
ವಿಪಕ್ಷ ನಾಯಕರ ಲಿಂಗಾಯತರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ (BJP) ವೀರಶೈವ ಲಿಂಗಾಯತರನ್ನು ಮೂಲೆಗುಂಪು ಮಾಡುವ ಸಂದರ್ಭ ಯಾವುದೇ ಕಾರಣಕ್ಕೂ ಬರುವುದಿಲ್ಲ. ವೀರಶೈವ ಲಿಂಗಾಯತರನ್ನು ಮೂಲೆಗುಂಪು ಮಾಡುವುದು ಕಾಂಗ್ರೆಸ್ (Congress) ಮಾತ್ರ ಎಂದು ಅವರು ಆರೋಪಿಸಿದ್ದಾರೆ.
ಮುಂದೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಮಸ್ಯೆಯಾದರೆ ಏನು ಮಾಡಬೇಕೆಂದು ಬುಧವಾರ ಸಮುದಾಯದ ನಾಯಕರು ಸಭೆ ಮಾಡಿದ್ದೇವೆ. ವೀರೇಂದ್ರ ಪಾಟೀಲ್ ಹಾಗೂ ನಿಜಲಿಂಗಪ್ಪ ಅವರ ಕಾಲದಲ್ಲಿ ಏನು ಬೆಳವಣಿಗೆಯಾಗಿದೆ ಎಂಬುದನ್ನು ಚರ್ಚಿಸಿದ್ದೇವೆ. ಕಾಂಗ್ರೆಸ್‍ನವರು ಗಂಟೆಗೊಂದು ದಾಳ ಉರುಳಿಸುತ್ತಾರೆ. ಈ ದಾಳ ಯಾವ ಪರಿಣಾಮವನ್ನೂ ಬೀರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಕೆ