ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ ಡಿಕೆಶಿ ಮತ್ತು ಅವರ ಕುಟುಂಬಕ್ಕೆ ಸಮನ್ಸ್ ಜಾರಿಯಾಗಿದೆ.
ನಾಳೆಯಿಂದ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಈ ಸಮನ್ಸ್ ಜಾರಿ ಮಾಡಿದ್ದಾರೆ. ಆದ್ರೆ, ವೈಯುಕ್ತಿಕ ಕೆಲಸಗಳು ಇದ್ದಾವೆ ಅಂತ ಡಿಕೆಶಿ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದಾರೆ. ಅವರ ಈ ಬೇಡಿಕೆಗೆ ಐಟಿ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುವುದಾಗಿ ತಿಳಿದುಬಂದಿದೆ.
ಡಿಕೆಶಿ ಗುರುಗಳಾದ ದ್ವಾರಕನಾಥ್‍ಗೂ ಸಮನ್ಸ್ ಜಾರಿ ಮಾಡಿದ್ದು, ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ದ್ವಾರಕನಾಥ್ ಸೋಮವಾರ ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.