ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಐಟಿ ದಾಳಿ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ (D.K.Suresh) ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ವಾಜರಹಳ್ಳಿಯಲ್ಲಿ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದರು. ಡಿ.ಕೆ.ಸುರೇಶ್ ಬಳಿ ಡ್ರೈವರ್ ಆಗಿದ್ದ ರಘು ಮನೆಯಲ್ಲಿ ಪರಿಶೀಲನೆ ನಡೆಸಿದರು. ಬಳಿಕ ಗಣಪತಿಪುರದಲ್ಲಿರುವ ಮನೆ ಮೇಲೂ ದಾಳಿ ಮಾಡಿದರು. ಇದನ್ನೂ ಓದಿ: ಕೊತ್ವಾಲ್ ಬ್ರದರ್ಸ್ ‘ಆ ದಿನಗಳ’ ಗೂಂಡಾಗಿರಿ ಮುಂದುವರೆಸಿದ್ದಾರೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ
- Advertisement
ಮನೆಯಲ್ಲಿ ಪರಿಶೀಲನೆ ನಡೆಸಿ ನಂತರ ದಾಳಿಯನ್ನು ಮುಕ್ತಾಯಗೊಳಿಸಿದರು.