Connect with us

Bengaluru City

ಮಾಜಿ ಡಿಸಿಎಂ ಪರಮೇಶ್ವರ್ ಗೆ ಐಟಿ ಶಾಕ್

Published

on

ಬೆಂಗಳೂರು: ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಏಳು ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

ಪರಮೇಶ್ವರ್ ಅವರ ಒಡೆತನದ ಶಾಲಾ-ಕಾಲೇಜುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ನೆಲಮಂಗಲದಲ್ಲಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನಲ್ಲಿರುವ ಶಾಲಾ-ಕಾಲೇಜುಗಳ ಕಚೇರಿಯ ಮೇಲೆ ಅಧಿಕಾರಿಗಳು ನಡೆಸಿದ್ದಾರೆ.

ಐಟಿ ದಾಳಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಕೈ ನಾಯಕರನ್ನು ಟಾರ್ಗೆಟ್ ಮಾಡಿಕೊಳ್ಳುತ್ತಿದೆ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿಯೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆದಿತ್ತು. ಈ ದಾಳಿ ರಾಜಕೀಯ ದುರುದ್ದೇಶ ಹೊಂದಿದ್ದು, ಬಿಜೆಪಿ ನಾಯಕರ ಮೇಲ್ಯಾಕೆ ಐಟಿ ದಾಳಿ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.