ಬೆಂಗಳೂರು: ಸರ್ಕಾರಕ್ಕೆ ತೆರಿಗೆ (Tax) ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಗಳಿಗೆ ಆದಾಯ ತೆರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಎಸ್.ಜೆ ಪಾರ್ಕ್, ಜಯನಗರ ಸೇರಿದಂತೆ 8 ಕಡೆಗಳಲ್ಲಿ ಖಾಸಗಿ ಕಂಪನಿಗಳ ಮೇಲೆ ಇಲಾಖೆ ದಾಳಿ (IT Raid) ನಡೆಸಿದೆ.
ಬುಧವಾರ (ಫೆ.7) ರಂದು ಬೆಳಗ್ಗೆ 6 ಗಂಟೆಯಿಂದಲೇ ಜೆ.ಸಿ ರಸ್ತೆಯಲ್ಲಿರುವ ಜೈನ್ಸ್‌ಹೈಟ್ಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್ ಹೇಳಿಕೆ ವಿರುದ್ಧ ಮೋದಿ ಕಿಡಿ
Advertisement
Advertisement
ಜನ ಜಯನಗರ 8ನೇ ಬ್ಲಾಕ್‌ನಲ್ಲಿ ಆಂಧ್ರ ಪ್ರದೇಶದ ಉದ್ಯಮಿಗೆ ಸೇರಿದ ಕಚೇರಿ ಹಾಗೂ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮನೆಯಲ್ಲಿ ವಿವಿಧ ದಾಖಲೆ ಪತ್ರಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ
Advertisement
Advertisement
ಇದರೊಂದಿಗೆ ರಸ್ತೆ ಗುತ್ತಿಗೆದಾರ ಹಾಗೂ ಉದ್ಯಮಿಯೂ ಆಗಿರುವ ವಂಶಿ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ. ವಂಶಿ ಪತ್ನಿ ವೈದ್ಯೆಯಾಗಿದ್ದು, ಕುಟುಂಬ ಜಯನಗರದಲ್ಲಿ ನೆಲೆಸಿದೆ. ವಂಶಿ ಅವರು ಗುತ್ತಿಗೆ ಕಾಮಗಾರಿಗಳಲ್ಲಿ ತೆರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಐಟಿ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?