ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಐಟಿ ದಾಳಿ (IT Raid) ನಡೆಸಲಾಗಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆ ಬಳಿ ಇರುವ ಇಟಿಎ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ಇರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆಸಿದ್ದಾರೆ. 2 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ
Advertisement
Advertisement
ಆಡುಗೋಡಿ ಬಳಿಯ ಆಕ್ರೋಪೊಲಿಸ್ ಅಪಾರ್ಟ್ಮೆಂಟ್ನಲ್ಲಿಯೂ ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಕ್ಕಿ ಘೋಷ್ ಎಂಬವರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿಯಾಗಿರುವ ರಿಕ್ಕಿ ಘೋಷ್ ನೆಲೆಸಿರುವ ಅಪಾರ್ಟ್ಮೆಂಟ್ನಲ್ಲಿ ಹುಡುಕಾಟ ನಡೆಯುತ್ತಿದೆ. ಇನೋವಾ ಕಾರ್ನಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದಾರೆ. ಇದನ್ನೂ ಓದಿ: Exclusive: ನಾನು ಬ್ಲೂ ಫಿಲಂ ತೋರಿಸಿದ್ರೆ ರಾಜಕೀಯ ನಿವೃತ್ತಿ: ಡಿಕೆಶಿ