ಬೆಂಗಳೂರು: ಬೆಂಗ್ಳೂರು (Bengaluru) ಮತ್ತು ಮೈಸೂರಿನ (Mysuru) ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು (IT Officers) ಶುಕ್ರವಾರ ದಾಳಿ (IT Raid) ನಡೆಸಿದ್ದು, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡ್ತಿದ್ದ ಫೈನಾನ್ಸಿಯರ್‌ಗಳ ಮನೆ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್‌ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇದನ್ನೂ ಓದಿ:ರವಿ ಕುಮಾರ್ ಶಾಸಕರಾಗುವುದು ಸತ್ಯ, ಕುಮಾರಸ್ವಾಮಿ ಸಿಎಂ ಆಗೋದು ಅಷ್ಟೇ ಸತ್ಯ: ಹೆಚ್‌ಡಿಡಿ
Advertisement
Advertisement
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿಯಿಂದ ಸಂಚು: ಕಾಂಗ್ರೆಸ್ ಆಡಿಯೋ ಬಾಂಬ್
Advertisement
Advertisement
ಬೆಂಗಳೂರಿನ ಶಾಂತಿನಗರ, ಕಾಕ್ಸ್ಟೌನ್, ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.