ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ

Advertisements

ಬೆಂಗಳೂರು: ಆದಾಯ ತೆರಿಗೆ ವಂಚನೆ ಆರೋಪದಡಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಕೆಜಿಎಫ್ ಬಾಬು ನಿವಾಸ ಸೇರಿ 7 ಕಡೆಗಳಲ್ಲಿ ಶನಿವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisements

ಇಂದು ಬೆಳಗ್ಗೆ 7:30ರ ಸುಮಾರಿಗೆ 4 ಇನೋವಾ ಕಾರಿನಲ್ಲಿ ಐಟಿ ಅಧಿಕಾರಿಗಳು ವಸಂತನಗರಕ್ಕೆ ಬಂದಿದ್ದಾರೆ. ಅಲ್ಲಿಯ ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಚುನಾವಣಾ ನಿಂತು ಸೋತಿದ್ದ ಕೆಜಿಎಫ್ ಬಾಬು, ಬೆಂಗಳೂರು ನಗರ ಸ್ಥಳೀಯ ಸಂಸ್ಥೆಯಿಂದ ಪರಿಷತ್‍ಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ. ಆದಾಯ ತೆರಿಗೆ ವಂಚನೆ ಆರೋಪದಡಿ ದಾಳಿ ಬೆಳಗ್ಗೆಯಿಂದ 7 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಆಪ್ತರಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಕೆಜಿಎಫ್ ಬಾಬು, ಚುನಾವಣೆ ಸಂದರ್ಭದಲ್ಲಿ 1,741 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದರು. ಆದಾಯ ತೆರಿಗೆಯಲ್ಲಿ ವ್ಯತ್ಯಯ ಶಂಕೆ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆಸಿದೆ.

Advertisements

ರುಕ್ಸಾನಾ ಪ್ಯಾಲೇಸ್, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳು ಸೇರಿದಂತೆ ಅಧಿಕಾರಿಕಾರಿಗಳು ಒಟ್ಟು 7 ಕಡೆ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕೆಜಿಎಫ್ ಬಾಬು ಸ್ನೇಹಿತರ ಮನೆಯ ಮೇಲೂ ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುಗೆ ಸೇರಿದ ಮನೆ, ಕಚೇರಿ ಸೇರಿ ಹಲವೆಡೆ ಶೋಧ ಪರಿಶೀಲನೆ ನಡೆದಿದೆ.

ಕಳೆದ ಐದು ಘಂಟೆಗಳಿಂದ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದ್ದು, ಒಟ್ಟು 23 ಬ್ಯಾಂಕ್ ಖಾತೆಗಳನ್ನು ಕೆಜಿಎಫ್ ಬಾಬು ಕುಟುಂಬಸ್ಥರು ಹೊಂದಿದ್ದಾರೆ. ಪತ್ನಿ ಮತ್ತು ಮಕ್ಕಳ ಹೆಸರಲ್ಲಿ 11 ಅಕೌಂಟ್ ಹೊಂದಿರುವ ಕೆಜಿಎಫ್ ಬಾಬು ಅವರು ಯೂಸಫ್ ಫರೀಫ್, ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಫರೀಫ್ ಹೆಸರಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಬಾಬು ಕುಟುಂಬಸ್ಥರ ಅಕೌಂಟ್‍ಗಳಲ್ಲಿ 70 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ.

Advertisements

ಕೆಲ ತಿಂಗಳ ಹಿಂದೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಮುಂಬರುವ 2023ರ ವಿಧಾನಸಭಾ ಚುನಾಚಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಉಮ್ರಾ ಡೆವಲಪರ್ಸ್ ಕಂಪನಿಯ ಮಾಲೀಕರಾಗಿದ್ದಾರೆ. ಸ್ಕ್ರಾಪ್ ಉದ್ಯಮದಲ್ಲಿ ಕೋಟ್ಯಂತರ ರೂ. ಹಣ ಗಳಿಸಿದ್ದಾಗಿ ಕೆಲವೆಡೆ ಹೇಳಿಕೊಂಡಿದ್ದ. ಇದನ್ನೂ ಓದಿ: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ

ಐಟಿ ದಾಳಿಗೂ ಕೆಜಿಎಫ್ ಬಾಬುಗೂ ಅವಿನಾಭಾವ ಸಂಬಂಧವಿದೆ. ಕೆಜಿಎಫ್ ಬಾಬು ಕಳೆದ 15 ವರ್ಷದಲ್ಲಿ 7ನೇ ಬಾರಿಗೆ ಐಟಿ ದಾಳಿ ಎದುರಿಸುತ್ತಿದ್ದಾರೆ. ಕರ್ನಾಟಕ ಅಷ್ಟೆ ಅಲ್ಲದೆ ತಮಿಳುನಾಡು, ಆಂಧ್ರ ಹಾಗೂ ಮಹಾರಾಷ್ಟ್ರದಲ್ಲೂ ರಿಯಲ್ ಎಸ್ಟೆಟ್ ಉದ್ಯಮ ನಡೆಸುತ್ತಿರುವ ಕೆಜಿಎಫ್ ಬಾಬು ಎಲ್ಲಾ ಕಡೆಗಳಲ್ಲಿ ಆಕ್ಷನ್ ಸೈಟ್‍ಗೆಳ ಬಿಡ್ಡಿಂಗ್‍ನಲ್ಲಿ ಭಾಗವಹಿಸಿ ಜಾಗ ಖರೀದಿ ಮಾಡಿ ಫೇಮಸ್ ಆಗಿದ್ದಾರೆ. ಇವರು ಕೆಜಿಎಫ್ ಬಾಬು ಎನ್ನುವುದಕ್ಕಿಂತಲೂ ಆಕ್ಷನ್ ಬಾಬು ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಇದನ್ನೂ ಓದಿ: ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

Advertisements
Exit mobile version