ಧಾರವಾಡ: ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ.
ಧಾರವಾಡದ ಉದ್ಯಮಿ ಹಾಗೂ ಗುತ್ತಿಗೆದಾರರಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮುಖಂಡ ಹಾಗೂ ಡಿಕೆಶಿ ಆಪ್ತರಾದ ರಾಬರ್ಟ್ ದದ್ದಾಪೂರಿ ಹಾನಗಲ್ ಉಪಚುನಾವಣೆಯಲ್ಲಿ ಯುಬಿ ಶೆಟ್ಟಿ ಭಾಗವಹಿಸಿಲ್ಲ ಎಂದಿದ್ದಾರೆ. ಅಲ್ಲದೇ ಯುಬಿ ಶೆಟ್ಟಿ ಅವರು ಉಡುಪಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ್ದಾರೆ. ಹೀಗಾಗಿ ಅವರ ಮೇಲೆ ಐಟಿ ದಾಳಿ ನಡೆದಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಟಿ-20 ವಿಶ್ವಕಪ್ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್
ಓರ್ವ ಮಹಿಳಾ ಅಧಿಕಾರಿ ಸೇರಿ 5 ಜನರ ಐಟಿ ತಂಡದಿಂದ ಈ ದಾಳಿ ನಡೆದಿದ್ದು, ಹಲವು ದಾಖಲೆ ಪರಿಶೀಲನೆ ನಡೆದಿದೆ. ಸದ್ಯ ಯುಬಿ ಶೆಟ್ಟಿ ಗುತ್ತಿಗೆದಾರ ಕೆಲಸ ಬಿಟ್ಟು ಶಾಲಾ ಕಾಲೇಜ್ ಆರಂಭ ಮಾಡಿದ್ದರು ಎಂದು ಅವರ ಆಪ್ತರು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!