ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್‌ – ಬೆಂಗಳೂರಿನ 30 ಕಡೆ ದಾಳಿ

Public TV
1 Min Read
IT raid

ಬೆಂಗಳೂರು: ಬೆಂಗಳೂರಿನ (Bengaluru) ಉದ್ಯಮಿಗಳಿಗೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ಶಾಕ್‌ ನೀಡಿದೆ. ನಗರದ 30 ಕಡೆಗಳಲ್ಲಿ ದಾಳಿ ನಡೆಸಿರುವ ಐಟಿ (IT Raid) ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚಿನ್ನದ ಅಂಗಡಿಗಳು, ಮೆಡಿಕಲ್‌ ಶಾಪ್‌ಗಳು, ಆಸ್ಪತ್ರೆಗಳ ಮಾಲೀಕರ ಮನೆ ಹಾಗೂ ಉದ್ಯಮಿಗಳ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚರಾಸ್ತಿ ಹಾಗೂ ಸ್ಥಿರಾಸ್ತಿ ವರಮಾನದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಅರಣ್ಯದಲ್ಲಿ ತರಬೇತಿ: ಉಗ್ರರಿಂದ ಸ್ಫೋಟಕ ಮಾಹಿತಿ

ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. ಒಂದೊಂದು ತಂಡದಲ್ಲಿ 5 ರಿಂದ 6 ಮಂದಿ ಅಧಿಕಾರಿಗಳಿದ್ದಾರೆ.

ತೆರಿಗೆ ವಂಚನೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಾವೇರಿ ಥಿಯೇಟರ್ ಬಳಿಯಿರುವ ಚಿನ್ನದ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶಾಂತಿನಗರದಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೂ ರೇಡ್‌ ನಡೆದಿದೆ.

Web Stories

Share This Article