ಕಲಬುರಗಿ: ಇತ್ತೀಚೆಗಷ್ಟೇ ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದ ಪ್ರಿಯಾಂಕ್ ಖರ್ಗೆ (Priyank Kharge) ಬೆಂಬಲಿಗನ ಮನೆ ಮೇಲೆ ಐಟಿ ಅಧಿಕಾರಿಗಳು ಶನಿವಾರ ರಾತ್ರಿ ದಾಳಿ (IT Raid) ನಡೆಸಿದ ಪ್ರಕರಣ ಕಲಬುರಗಿಯಲ್ಲಿ ನಡೆದಿದೆ.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ, ಅವರಿಗೆ ಸೇರಿದ ಹೋಟೆಲ್ ಹಾಗೂ ಸ್ಟೋನ್ ಕ್ರಷರ್ನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡ ರಾತ್ರಿ 11 ಗಂಟೆಯವರೆಗೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಸೇರಿದ ಆಸ್ತಿ ಹಾಗೂ ಆದಾಯ ವಿವರಗಳ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿ ತೆರಳಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?
Advertisement
Advertisement
ಚುನಾವಣೆ ಸಮೀಪಿಸುತ್ತಿದ್ದ ಕೆಲವು ದಿನಗಳ ಹಿಂದೆ ಅಷ್ಟೇ ಅರವಿಂದ್ ಚೌಹಾನ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಸಂಸ್ಕೃತ ಪರೀಕ್ಷೆಯಲ್ಲಿ ಇರ್ಫಾನ್ಗೆ ಮೊದಲ ಸ್ಥಾನ – 13,000 ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಸಾಧನೆ