ಬೆಂಗಳೂರು: ಬೆಳ್ಳಂಬೆಳಗ್ಗೆ ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಮೂರು ಕಾರಣಗಳಿಂದ ನಟಿ ರಶ್ಮಿಕಾ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ನಟಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ.
Advertisement
Advertisement
ಮೊದಲನೆಯದಾಗಿ ನಟಿ ರಶ್ಮಿಕಾ ಪಡೆಯುತ್ತಿರುವ ಸಂಭಾವನೆಯ ಬಗ್ಗೆ ತಪ್ಪು ಮಾಹಿತಿ ನೀಡಿರುವುದು. ಜಾಹೀರಾತು ಏಜೆನ್ಸಿಗಳ ಜೊತೆಯೂ ರಶ್ಮಿಕಾ ಷೇರು ವ್ಯವಹಾರ ನಡೆಸುತ್ತಿದ್ದಾರೆ. ಜೊತೆಗೆ ರಶ್ಮಿಕಾ ಟಾಲಿವುಡ್‍ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಮಾಹಿತಿ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಹೀಗಾಗಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಶ್ಮಿಕಾ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
Advertisement
Advertisement
10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಶೂಟಿಂಗ್ ಗಾಗಿ ರಶ್ಮಿಕಾ ಹೈದರಾಬಾದಿಗೆ ಹೋಗಿದ್ದಾರೆ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.