ಬೆಂಗಳೂರು: ಸ್ಯಾಂಡಲ್ವುಡ್ಗೆ ಬೆಳ್ಳಂಬೆಳ್ಳಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
Advertisement
Advertisement
ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ಬೆಂಗಳೂರಿನ ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸದ ಮೇಲೂ ದಾಳಿ ನಡೆದಿದೆ.
Advertisement
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮನೆ ಮೇಲೆ ಹಾಗೂ ‘ಗಜಕೇಸರಿ’, ‘ರುಸ್ತುಂ’ ನಿರ್ಮಾಪಕ ಜಯಣ್ಣ ಮನೆ ಮೇಲೂ ಐಟಿ ದಾಳಿ ನಡೆದಿದೆ. ಏಕಕಾಲದಲ್ಲಿ ರೇಡ್ ಮಾಡಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv