ನಟ ರಾಮ್ ಚರಣ್ ಅಭಿನಯದ ʻಗೇಮ್ ಚೇಂಜರ್ʼ (Game Changer) ಸೇರಿದಂತೆ ಹಿಟ್ ಸಿನಿಮಾಗಳ ನಿರ್ಮಾಪಕ ದಿಲ್ ರಾಜು (Dil Raju) ಅವರಿಗೆ ಆದಾಯ ತೆರಿಗೆ ಇಲಾಖೆ (Income Tax officer) ಶಾಕ್ ಕೊಟ್ಟಿದೆ.
Advertisement
ಒಟ್ಟು 55 ತಂಡಗಳು ನಿರ್ಮಾಪಕ ದಿಲ್ ರಾಜು ಅವರ ಮನೆ, ಕಚೇರಿ ಸೇರಿದಂತೆ 8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿವೆ. ಹೈದರಾಬಾದ್‌ನ ಜೂಬ್ಲಿಹಿಲ್ಸ್, ಬಂಜಾರಹಿಲ್ಸ್‌ನಲ್ಲಿರುವ ನಿವಾಸಗಳ ಮೇಲೆ, ದಿಲ್ ರಾಜು ಸಹೋದರ ಶಿರೀಷ್, ಪುತ್ರಿ ಹನ್ಸಿತ ರೆಡ್ಡಿ ಹಾಗೂ ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ
Advertisement
ಇತ್ತೀಚೆಗಷ್ಟೇ ದೊಡ್ಡ ಬಜೆಟ್ ಸಿನಿಮಾ ʻಗೇಮ್ ಚೇಂಜರ್ʼ ನಿರ್ಮಿಸಿದ್ದರು. ಇದು ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಅದೇ ಹೊತ್ತಿಗೆ ಕಡಿಮೆ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ ʻಸಂಕ್ರಾಂತಿಕಿ ವಸ್ತುನ್ನಾಂʼ ಸಿನಿಮಾ ಕೂಡ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ನಡುವೆ ಐಟಿ ಅಧಿಕಾರಿಗಳು ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ – ಉನ್ನತ ಅಧಿಕಾರಿಗಳೊಂದಿಗೆ ಹೆಚ್‌ಡಿಕೆ ಚರ್ಚೆ