ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ (Income Tax Department) ವಿಚಾರಣೆ ನಡೆಸಲಿದೆ.
ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣದ ಬಳಿಕ ಬಳ್ಳಾರಿ ಸೆಂಟ್ರಲ್ ಜೈಲಿಗೆ (Ballary Central Jail) ವರ್ಗಾಯಿಸಲಾಗಿತ್ತು. ಇಂದು (ಸೆ.23ರಂದು) ನಡೆಯಬೇಕಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ಇದನ್ನೂ ಓದಿ:ರೇಣುಕಾ ಹತ್ಯೆ ಕೇಸ್ – ಮೂವರಿಗೆ ಜಾಮೀನು ಮಂಜೂರು
Advertisement
Advertisement
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿದ್ದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.
Advertisement
ಕೋರ್ಟ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದರ್ಶನ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್ – ಮೊದಲ ಜಾಮೀನು ಮಂಜೂರು