ಮೈಸೂರು: ನಮ್ಮ ದೇಶದ ಪ್ರತಿಯೊಬ್ಬರ ಪ್ರತಿನಿಧಿಯಾಗಿರುವಂತಹ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದು ಬಹಳ ಸಂತೋಷವಾಯಿತು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ಮೈಸೂರು ಆಸ್ಥಾನದ ಒಡೆಯರ ಕಾಲದಿಂದಲೂ ಯೋಗಾಭ್ಯಾಸ ನಡೆಯುತ್ತಿದೆ. ಮೈಸೂರು ಆಸ್ಥಾನದಲ್ಲಿ ಯೋಗ ಮುಂದುವರೆಯುವುದಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣ ರಾಜ ಒಡೆಯರ್ ನೀಡುತ್ತಿದ್ದರು. ಈ ಕಾರ್ಯಕ್ರಮ ಆ ಪರಂಪರೆಯ ಪ್ರತಿಬಿಂಬ ಎಂದೇ ಹೇಳಬಹುದು. ವಿಶೇಷವೆಂದರೆ 2 ವರ್ಷಗಳ ನಂತರ ಸಾರ್ವಜನಿಕವಾಗಿ ಕಾರ್ಯಕ್ರಮ ನಡೆಯುತ್ತಿರುವುದು ಅತ್ಯಂತ ಸಂತೋಷಕರವಾದ ವಿಚಾರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ
Advertisement
Advertisement
ದಿನನಿತ್ಯ ಯೋಗಾಭ್ಯಾಸ ಮಾಡಿ, ಯೋಗಾಭ್ಯಾಸ ಶಾರೀಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ಕೂಡ ನಿಮ್ಮನ್ನು ಆರೋಗ್ಯಕರವಾಗಿರಿಸುತ್ತದೆ. ಯೋಗಾಭ್ಯಾಸ ಮುಂದುವರೆದರೆ ಇಡೀ ಸಮಾಜವೇ ಆರೋಗ್ಯಕರವಾಗಿರುತ್ತದೆ. ಜೀವನದ ಪ್ರಮುಖ ಅಂಶಗಳಲ್ಲಿ ಯೋಗಾಭ್ಯಾಸ ಕೂಡ ಒಂದಾಗಿದೆ ಎಂದು ಯುವಕರಿಗೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ