ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ!

Public TV
1 Min Read
Melodi Italian PM Giorgia Meloni and PM Narendra Modi

ದುಬೈ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Italian PM Giorgia Meloni) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಸೆಲ್ಫಿ ತೆಗೆದು #Melodi ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ದುಬೈನಲ್ಲಿ (Dubai) ನಡೆದಿದ್ದು ವಿಶ್ವದ ನಾಯಕರು ಭಾಗವಹಿಸಿದ್ದರು. ಈ ವೇಳೆ ಮೋದಿ ಮತ್ತು ಮೆಲೋನಿ ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿ, COP28 ನಲ್ಲಿ ಉತ್ತಮ ಸ್ನೇಹಿತರು ಎಂದು ಬರೆದಿದ್ದಾರೆ. ಇದನ್ನೂ ಓದಿ: ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

ಮೋದಿ ಅವರು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿ ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತ ಮತ್ತು ಇಟಲಿ ನಡುವಿನ ಸಹಯೋಗದ ಪ್ರಯತ್ನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ 2028ರಲ್ಲಿ ಭಾರತದಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಆಯೋಜನೆಯ ಪ್ರಸ್ತಾಪವನ್ನು ಮೋದಿ ಮಾಡಿದ್ದಾರೆ.

ಏನಿದು ಮೆಲೋಡಿ?
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ನರೇಂದ್ರ ಮೋದಿ ಇಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ. ಜಿ20 ಸಮ್ಮೇಳನಕ್ಕೆ ಮೆಲೋನಿ ಬಂದಾಗ #Melodi ಹ್ಯಾಶ್‌ ಟ್ಯಾಗ್‌ ಫೇಮಸ್‌ ಆಗಿತ್ತು. ಮೆಲೋನಿ ಮತ್ತು ಮೋದಿ ಹೆಸರನ್ನು ಸೇರಿಸಿ ಅಭಿಮಾನಿಗಳು Melodi ಟ್ಯಾಗ್‌ ಬಳಸಿ ಪೋಸ್ಟ್‌ ಮಾಡುತ್ತಿದ್ದರು. ಈಗ ಸ್ವತಹ: ಜಾರ್ಜಿಯಾ ಮೆಲೋನಿ ಅವರೇ ಈ ಹ್ಯಾಶ್‌ಟ್ಯಾಗ್‌ ಬಳಸಿ ಪೋಸ್ಟ್‌ ಮಾಡಿದ್ದು ಸೆಲ್ಫಿ ಫೋಟೋ ವೈರಲ್‌ಆಗಿದೆ.

Share This Article