ರೋಮ್: ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಇಟಲಿಯ ಪ್ರಧಾನಿ ಮಾರಿಯೋ ದ್ರಾಘಿ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಕ್ವಿರಿನಾಲೆ ಅರಮನೆಯಲ್ಲಿ ನಡೆದ ಸಭೆಯಲ್ಲಿ ದ್ರಾಘಿ ಅವರು ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆ ಪತ್ರವನ್ನು ಸ್ವೀಕರಿಸಿರುವ ಇಟಲಿ ಅಧ್ಯಕ್ಷ, ಸದ್ಯದ ಪರಿಸ್ಥಿತಿಯಲ್ಲಿ ಹಂಗಾಮಿ ಪ್ರಧಾನಿ ಆಗಿ ಮುಂದುವರಿಯಲು ಮನವಿ ಮಾಡಿಕೊಂಡಿದ್ದಾರೆ.
ಯುರೋಪಿಯನ್ ಒಕ್ಕೂಟ ಸಹಾಯದ ಕೋವಿಡ್ ಸಾಂಕ್ರಾಮಿಕ ಚೇತರಿಕೆ ಯೋಜನೆ ಅನುಷ್ಠಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂಬ ದ್ರಾಘಿ ಕರೆಯನ್ನು ಎಡ, ಬಲ ಮತ್ತು ಪ್ಯಾಪುಲಿಸ್ಟ್ ಪಕ್ಷಗಳನ್ನೊಳಗೊಂಡಿರುವ ಸಮ್ಮಿಶ್ರ ಸರ್ಕಾರದ ಸದಸ್ಯರು ನಿರಾಕರಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನನ್ನು ಕಾಂಗ್ರೆಸ್‍ಗೆ ಕರೆದಿಲ್ಲ, ಬಿಜೆಪಿಗೆ ಹೋಗಬೇಡ ಅಂದಿದ್ದಾರೆ: ಜಿಟಿಡಿ
ಅಧ್ಯಕ್ಷ ಮಟ್ಟರೆಲ್ಲಾ ಸಂಸತ್ತನ್ನು ವಿಸರ್ಜಿಸುತ್ತಾರೋ ಅಥವಾ ಅವಧಿಪೂರ್ವ ಚುನಾವಣೆಗಳನ್ನು ನಡೆಸುತ್ತಾರೋ ಎನ್ನುವುದು ಈವರೆಗೆ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಲ್‌ಗೇಟ್ಸ್ ಹಿಂದಿಕ್ಕಿ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ