– ಒಂದೇ ದಿನದಲ್ಲಿ 5,560 ಹೊಸ ಪ್ರಕರಣ ಪತ್ತೆ
ರೋಮ್: ಜಗತ್ತಿನಲ್ಲಿ ಮಹಾಮಾರಿ ಕೊರೊನಾ ತನ್ನ ಪಟ್ಟನ್ನು ಬಿಗಿಗೊಳಿಸುತ್ತಿದೆ. ಒಟ್ಟು 188 ದೇಶಗಳಿಗೆ ವಿಸ್ತರಿಸಿರುವ ಕೊರೊನಾ, 13 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. 3 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ವ್ಯಾಪಿಸಿದೆ. ಇದೀಗ ಇಟಲಿಯಲ್ಲಿ ಒಂದೇ ದಿನ 651 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಟಲಿಯೊಂದರಲ್ಲೇ ನಿನ್ನೆ ಒಂದೇ ದಿನ 800ಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿ ಆಗಿದ್ದರು. ಇಂದು 651 ಮಂದಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ. ಅಲ್ಲದೇ ಇಂದು 5560 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.
Advertisement
ಇದೀಗ ಇಟಲಿಯೊಂದರಲ್ಲೇ ಮೃತರ ಸಂಖ್ಯೆ 5,500ಕ್ಕೆ ಏರಿಕೆ ಆಗಿದೆ. ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 59,138 ಮಂದಿ ತುತ್ತಾಗಿದ್ದು, ಅವರಲ್ಲಿ 6,072 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 42,681 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.
Advertisement
ಇರಾನ್‍ನಲ್ಲಿ 1556, ಸ್ಪೇನ್‍ನಲ್ಲಿ 1381, ಫ್ರಾನ್ಸ್‌ನಲ್ಲಿ 562, ಬ್ರಿಟನ್‍ನಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ದೇಶಗಳನ್ನು ನಿರ್ಬಂಧದಲ್ಲಿ ಇಟ್ಟಿದೆ. ಜನರನ್ನು ಮನೆಗೆ ಸೀಮಿತ ಮಾಡಿದೆ. ಆಫ್ರಿಕಾ ಖಂಡಕ್ಕೂ ಕೊರೊನಾ ವಿಸ್ತರಿಸುತ್ತಿದೆ. ಆಫ್ರಿಕಾದ 41 ದೇಶಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.
Advertisement
ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಇಟಲಿಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದ್ದು, ಶನಿವಾರ ಒಂದೇ ದಿನಕ್ಕೆ 793 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.