– ಪಂಜಾಬ್ ಭಯೋತ್ಪಾದಕ ಚಟುವಟಿಕೆಗಳ ಕೇಂದ್ರವಾಗುತ್ತಿದೆ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿಯಾಗಿದೆ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
Advertisement
ಭದ್ರತಾ ಲೋಪದಿಂದ ನರೇಂದ್ರ ಮೋದಿ ಪಂಜಾಬ್ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಹಿನ್ನೆಲೆ ಕಂಗನಾ ರನೌತ್ ಕೋಪದಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
Advertisement
Advertisement
ಕಂಗನಾ ಇನ್‍ಸ್ಟಾಗ್ರಾಮ್ ನಲ್ಲಿ, ಪಂಜಾಬ್‍ನಲ್ಲಿ ಮೋದಿ ಅವರಿಗೆ ಈ ರೀತಿ ನಡೆದಿರುವುದು ನಾಚಿಕೆಗೇಡಿನ ಸಂಗತಿ. ಗೌರವಾನ್ವಿತ ಪ್ರಧಾನ ಮಂತ್ರಿಗಳು ಪ್ರಜಾಸತ್ತಾತ್ಮಕವಾಗಿ ಚುನಾಯಿತ ನಾಯಕ, ಪ್ರತಿನಿಧಿಯಾಗಿದ್ದಾರೆ. ಅವರು 1.4 ಬಿಲಿಯನ್ ಜನರ ಧ್ವನಿಯಾಗಿದ್ದಾರೆ. ಅವರ ಮೇಲಿನ ದಾಳಿ ಪ್ರತಿಯೊಬ್ಬ ಭಾರತೀಯನ ಮೇಲಿನ ದಾಳಿಯಾಗಿದೆ. ಇದು ನಮ್ಮ ಪ್ರಜಾಪ್ರಭುತ್ವದ ಮೇಲೆಯೇ ದಾಳಿಯಾಗಿದೆ. ಪಂಜಾಬ್ ಭಯೋತ್ಪಾದಕ ಚಟುವಟಿಕೆಗಳ ಕೇಂದ್ರವಾಗುತ್ತಿದೆ. ಒಂದು ವೇಳೆ ನಾವು ಇದನ್ನು ತಡೆಯದಿದ್ದರೆ ದೇಶವು ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಆಕ್ರೋಶದಿಂದ ಬರೆದು ಪೋಸ್ಟ್ ಮಾಡಿದ್ದಾರೆ.
Advertisement
ಬಟಿಂಡಾದಲ್ಲಿ ನಿನ್ನೆ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ಪಂಜಾಬ್ ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‍ನಲ್ಲಿ ತೆರಳುತ್ತಿದ್ದಾಗ ರೈತರು ರಸ್ತೆಯನ್ನು ತಡೆದ ಪ್ರತಿಭಟ£ ಮಾಡಿದ್ದಾರೆ. ಹೀಗಾಗಿ ಮೋದಿ ಅವರು ಫ್ಲೈ ಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು. ಇದನ್ನೂ ಓದಿ: ಕ್ರಿಕೆಟ್ ಲೆಜೆಂಡರಿ ಬೌಲರ್ ಪಾತ್ರದಲ್ಲಿ ಅನುಷ್ಕಾ ಶರ್ಮಾ
ಘಟನೆಯ ಬಳಿಕ ಬಟಿಂಡಾ ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆ ಮಾತನಾಡಿದ್ದ ಮೋದಿ, ನಾನು ಜೀವಂತವಾಗಿ ಬಂದಿದ್ದೇನೆ. ನಿಮ್ಮ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿ ಎಂದು ಪಂಜಾಬ್ ಸರ್ಕಾರಕ್ಕೆ ಮಾತಿನಲ್ಲೇ ಕುಟುಕಿದ್ದರು.