ಮೈಸೂರು: ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ರದ್ದು ಮಾಡಿದರೆ ಒಳ್ಳೆಯದು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಕಲ್ಯಾಣ ಲಕ್ಷೀ ವೆಂಕಟರಮಣಸ್ವಾಮಿ ದೇವಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯದುವೀರ್ 1 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ರದ್ದು ಮಾಡಿದರೆ ಒಳ್ಳೆಯದು. ದೇಗುಲಗಳಲ್ಲಿ ಪ್ಲಾಸ್ಟಿಕ್ ಯಾವುದೇ ಪೂಜೆಗೆ ಬಳಕೆ ಆಗೋಲ್ಲ. ಹೀಗಾಗಿ ದೇಗುಲಗಳು ಪ್ಲಾಸ್ಟಿಕ್ ಮುಕ್ತವಾಗಬೇಕೆಂಬುದು ನನ್ನ ಅಭಿಪ್ರಾಯ ಎಂದರು.
Advertisement
ನಾನು ರಾಜಕೀಯಕ್ಕೆ ಬರೋಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧಿಸುವುದಿಲ್ಲ. ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇಲ್ಲ ಎಂದು ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾನು ಹೇಳಿಕೆ ಕೊಟ್ಟಿದ್ದೆ. ಈಗಲೂ ನಾನು ಅದನ್ನೆ ಹೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
Advertisement
ಮುಂದೆ ಏನಾಗುತ್ತೋ ನನಗೆ ಗೊತ್ತಿಲ್ಲ. ಆ ಕಾಲಕ್ಕೆ ತಕ್ಕಂತೆ ನಾವು ಬದಲಾಗಬೇಕಿದೆ. ಆದ್ರೆ ಸದ್ಯಕ್ಕಂತು ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದರು.