ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.
ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್‍ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದರ್ಶನ್, ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೀನಿ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.
ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ನೇಹಿತರು ಯಾರೇ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ಇದೇ ವೇಳೆ ದರ್ಶನ್ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv