ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಲೂಟಿ ಅಷ್ಟೇ ಎಂದು ಡಿಕೆಶಿ (D.K.Shivakumar) ಹೆಸರೇಳದೆ ಕಿಡಿಕಾರಿದರು. ಇದನ್ನೂ ಓದಿ: ಚನ್ನಗಿರಿ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಪರಮೇಶ್ವರ್
ಈ ಸರ್ಕಾರ ಬಂದ ನಂತರ ಬೆಂಗಳೂರಿನಲ್ಲಿ, ರಾಜ್ಯದಲ್ಲಿ ಒಂದೂ ಹೊಸ ಅಭಿವೃದ್ಧಿ ಆಗಿಲ್ಲ. ಅಕ್ಕಿ ಕೊಡೋ ಯೋಗ್ಯತೆ ಇಲ್ಲ. ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೂರು ತಿಂಗಳಿಂದ ಕೊಟ್ಟಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಬಿತ್ತನೆ ಬೀಜದ ಬೆಲೆ 70% ಏರಿಕೆ ಮಾಡಿದ್ದಾರೆ. ಗೊಬ್ಬರ ಸಿಕ್ತಿಲ್ಲ. ಇವತ್ತು ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿದ್ದ ನಾಗಮಂಗಲದ ಮಹಾನುಭಾವ, ತಾನು ಅಭ್ಯರ್ಥಿ ಆಗಬೇಕು ಅಂತಾ ಗೊಂದಲ ಮಾಡಿದ್ದ. ಆಗ ನಮ್ಮಲ್ಲೇ ಇದ್ದ ದೇವೇಗೌಡ ಟಿಕೆಟ್ ಸಿಗುತ್ತೋ ಇಲ್ವೋ ಅಂತಾ ಬಿಜೆಪಿ ಸೇರಿದ್ರಾ? ನಂತರ ಆ ಮಹಾನುಭಾವನೂ ಬಿಜೆಪಿ ಹೋದ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮತ್ತೆ ಸಿಎಂ ಕುರ್ಚಿ ಫೈಟ್ – ಆಪ್ತನ ಮೂಲಕ ಮುನ್ನುಡಿ ಬರೆಸಿದ್ರಾ ಡಿಕೆಶಿ?