ಕಲಬುರಗಿ: ಬರೀ ಭಾಷಣ ಮಾಡಿಕೊಂಡು ಕುಳಿತರೆ ಆಗಲ್ಲ. ನಮ್ಮನ್ನ ಕೆಣಕಿದವರಿಗೆ ತಕ್ಕ ಉತ್ತರ ಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.
ಕಲಬುರಗಿ (Kalaburagi) ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಐಕ್ಯತೆಗಾಗಿ ಮೋದಿ (Narendra Modi) ಸರ್ಕಾರ ಏನೇ ಕ್ರಮ ಕೈಗೊಂಡರೂ ನಮ್ಮ ಬೆಂಬಲವಿದೆ. ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು. ಆದರೆ ಇದರಲ್ಲೂ ರಾಜಕೀಯ ಆಗಬಾರದು. ನಮ್ಮ ದೇಶದನ್ನು ಕೆಣಕಿದ್ರೆ ನಾವು ಸುಮ್ಮನಿರಬಾರದು. ಪಾಕಿಸ್ತಾನದ (Pakistan) ಮೇಲೆ ಕ್ರಮ ಆಗಲಿ ಎಂದು ನಾವು ಬೆಂಬಲ ಕೊಟ್ಟಿದ್ದೇವೆ. ನಮಗೆ ದೇಶ ಮುಖ್ಯ. ಹೀಗಾಗಿ ಯಾವುದೇ ಕ್ರಮ ಕೈಗೊಂಡರೂ ನಮ್ಮ ಬೆಂಬಲ ಇರುತ್ತದೆ ಎಂದರು. ಇದನ್ನೂ ಓದಿ: ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ
ಜಾತಿ ಜನಗಣತಿ (Caste Census) ಬಗ್ಗೆ ನಾವು ಮೊದಲೇ ಆಗ್ರಹಿಸಿದ್ದೆವು. ಆದರೆ ಆಗ ಜಾತಿ ವಿಷಬೀಜ ಬಿತ್ತುತ್ತಾರೆ ಎಂದು ನಮ್ಮನ್ನು ಹೀಯಾಳಿಸಿದ್ದರು. ಬಿಹಾರ ಚುನಾವಣಾ ಗಿಮಿಕ್ ಇರಬಹುದು. ಆದರೆ ನಾನು ಅದರ ಬಗ್ಗೆ ಮಾತನಾಡಲ್ಲ. ದುರುದ್ದೇಶದಿಂದ ನೀವು ನಡೆದುಕೊಂಡರೆ ಯಾರೂ ಸಹಿಸಲ್ಲ. ಒಳ್ಳೆಯ ಉದ್ದೇಶದಿಂದ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ | ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ!