ಬೆಂಗಳೂರು/ ಧಾರವಾಡ: ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ವಿದ್ಯಾಕಾಶಿ ಧಾರವಾಡ ಹುಬ್ಬಳ್ಳಿಗಿಂತ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಸರ್ಕಾರದಿಂದ ಬರುವ ಭಾಗಶಃ ಅನುದಾನ ಹುಬ್ಬಳ್ಳಿಗೇ ಮೀಸಲಿಡಲಾಗುತ್ತಿದೆ. ಆ ಕಾರಣ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಿ ಧಾರವಾಡವನ್ನೂ ಅಭಿವೃದ್ಧಿ ಮಾಡಬೇಕು ಎಂದು ಧಾರವಾಡದ ಚಿಂತಕರು, ಸಾಹಿತಿಗಳು ಹಾಗೂ ಪಕ್ಷಾತೀತ ಕಾರ್ಯಕರ್ತರು ದಶಕಗಳ ಕಾಲ ಹೋರಾಟ ಮಾಡುತ್ತಲೇ ಬಂದಿದ್ದರು. ಆ ಹೋರಾಟಕ್ಕೆಈಗ ಜಯ ಸಿಕ್ಕಿದೆ.
Advertisement
ಧಾರವಾಡದಲ್ಲಿ 26 ವಾರ್ಡ್‌ಗಳಿದ್ದು, ಧಾರವಾಡ ಕೂಡ ಹುಬ್ಬಳ್ಳಿಯಂತೆ ಅಭಿವೃದ್ಧಿ ಕಾಣಬೇಕಾದರೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಆಗಲೇಬೇಕು ಎಂದು ದಶಕಗಳ ಕಾಲ ಹೋರಾಟ ನಡೆದಿತ್ತು. ಇತ್ತೀಚಿನ ಮೂರು ವರ್ಷಗಳಲ್ಲಿ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹೋರಾಟದಿಂದಾಗಿ ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಂಪರ್ ಕೊಡುಗೆ ನೀಡಿದೆ.
Advertisement
Advertisement
ಗುರುವಾರ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಇದು ಧಾರವಾಡ ಜನರ ಹರ್ಷವನ್ನು ಇಮ್ಮಡಿಗೊಳಿಸಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಶಾಕ್ – ಜ.5 ರಿಂದ ಬಸ್ ಪ್ರಯಾಣ ದರ ಏರಿಕೆ
Advertisement
ಕ್ಯಾಬಿನೆಟ್ ಸಭೆಯಲ್ಲಿ ಪ್ರತ್ಯೇಕ ಪಾಲಿಕೆ ಘೋಷಣೆಯಾಗುತ್ತಿದ್ದಂತೆ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರು ಧಾರವಾಡದ ಮಹಾನಗರ ಪಾಲಿಕೆ ಕಚೇರಿ ಎದುರು ಜಮಾಯಿಸಿ ವಿಜಯೋತ್ಸವ ಆಚರಿಸಿದರು. ಪರಸ್ಪರ ಧಾರವಾಡ ಪೇಡಾ ತಿನ್ನಿಸಿ ಸಂಭ್ರಮಿಸಿದರು. ಪಟಾಕಿ ಸಿಡಿಸಿ ಹಿರಿಯ ನಾಗರಿಕರು ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.
ಇತ್ತೀಚೆಗಷ್ಟೇ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರು ನಿಯೋಗವೊಂದನ್ನು ತೆಗೆದುಕೊಂಡು ಹೋಗಿ ಸಿಎಂ ಸಿದ್ದರಾಮಯ್ಯನವರಿಗೆ ಭೇಟಿಯಾಗಿದ್ದರು. ಶಾಸಕ ವಿನಯ್ ಕುಲಕರ್ಣಿ, ಸಚಿವ ಸಂತೋಷ ಲಾಡ್, ಪ್ರಸಾದ್ ಅಬ್ಬಯ್ಯ ಹಾಗೂ ಅರವಿಂದ ಬೆಲ್ಲದ ಅವರು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಲೇಬೇಕು ಎಂದು ಸರ್ಕಾರದ ಮೇಲೆ ಒತ್ತಡ ಕೂಡ ಹಾಕಿದ್ದರು.
ಈ ಹಿಂದೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೂಡ ಪ್ರತ್ಯೇಕ ಪಾಲಿಕೆ ಮಾಡುವ ಸಂಬಂಧ ಸಾಧಕ ಬಾಧಕಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈ ಎಲ್ಲ ಬೆಳವಣಿಗೆ ನಂತರ ಇದೀಗ ರಾಜ್ಯ ಸರ್ಕಾರ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಘೋಷಣೆ ಮಾಡಿ ಧಾರವಾಡಕ್ಕೆ ಬಂಪರ್ ಕೊಡುಗೆ ನೀಡಿದೆ.