ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ್ದರಿಂದ ಪ್ರಜಾಪ್ರಭುತ್ವಕ್ಕೆ ಇಂದು ಗೆಲುವು ಸಿಕ್ಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಡಿನ ರೈತರಿಗೆ ನನ್ನ ಮೊದಲ ಆದ್ಯತೆ ನೀಡುತ್ತೇನೆ. ಬರಗಾಲದಿಂದ ತತ್ತರಿಸುವ ರೈತರ ಪರವಾಗಿ ನಾವು ಕೆಲಸ ಮಾಡುತ್ತೇವೆ. ರಾಜ್ಯದ ಜನತೆ ಮತ್ತು ರೈತರ ಬರಗಾಲ ಸೇರಿದಂತೆ ಹಲವು ತೊಂದರೆಗಳಲ್ಲಿದ್ದಾರೆ. ರೈತರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಆದಷ್ಟು ಬೇಗ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದು ಹೇಳಿದರು.
Advertisement
Advertisement
ಸಿಟಿ ರವಿ ಮಾತನಾಡಿ, ದೋಸ್ತಿ ನಾಯಕರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆ ಸೇರಿದಂತೆ ರಾಜಕೀಯ ದೃವೀಕರಣ ನಡೆಯಲಿದೆ. ರಾಜ್ಯದ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಸರ್ಕಾರ ರಚನೆಯಾಗಲಿದೆ. ಶಾಸಕಾಂಗ ಪಕ್ಷ ಮತ್ತು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಮುಂದಿನ ನಡೆಯ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
Advertisement
It’s the victory of people of Karnataka.
It’s the end of an era of corrupt & unholy alliance.
We promise a stable & able governance to the people of Karnataka.
Together we will make Karnataka prosperous again ✌????
— BJP Karnataka (@BJP4Karnataka) July 23, 2019
Advertisement