ಬೆಂಗಳೂರು: ರಾಜ್ಯದಲ್ಲಿ ನೀಟ್ ಪರೀಕ್ಷೆ (NEET Exam) ರದ್ದು ಮಾಡಬೇಕು ಅಂತ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ (Ivan D’Souza) ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ನೀಟ್ ರದ್ದು ಮಾಡಲು ಒತ್ತಾಯ ಮಾಡಿದ್ರು.
Advertisement
ನೀಟ್ ಪರೀಕ್ಷೆಯಲ್ಲಿ ದೊಡ್ಡ ಅವ್ಯವಹಾರವಾಗಿದೆ. ಪೇಪರ್ ಲೀಕ್ ಆಗಿ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಹಿಂದೆ ಸಿಇಟಿ ಪರೀಕ್ಷೆ (CET Exam) ಇದ್ದಾಗ ನಮ್ಮ ಮಕ್ಕಳಿಗೆ ಹೆಚ್ಚು ಅನುಕೂಲ ಆಗ್ತಿತ್ತು. ನೀಟ್ ವ್ಯವಸ್ಥೆ ಫೆಲ್ಯೂರ್ ಸಿಸ್ಟಮ್. ಇದರಿಂದ ಮಕ್ಕಳಿಗೆ ಅನಾನುಕೂಲ. ಈ ಪರೀಕ್ಷೆಯಲ್ಲಿ ಸಾಮಾಜಿಕ ನ್ಯಾಯ ಇಲ್ಲ. ಹೀಗಾಗಿ ರಾಜ್ಯ ಸರ್ಕಾರ (Karnataka Government) ನೀಟ್ ರದ್ದು ಮಾಡಬೇಕು. ತಮ್ಮದೇ ಪರೀಕ್ಷಾ ವ್ಯವಸ್ಥೆ ಜಾರಿ ಮಾಡಬೇಕು ಅಂತ ಆಗ್ರಹಿಸಿದರು.
Advertisement
Advertisement
ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಕೇಂದ್ರ ಸರ್ಕಾರ ಇದರಲ್ಲಿ ಎಡವಟ್ಟು ಮಾಡಿದೆ. ನೀಟ್ ಪರೀಕ್ಷೆ ಮಾಡೋದ್ರಲ್ಲಿ ಕೇಂದ್ರ ಎಡವಿದೆ. ಪೇಪರ್ ಲೀಕ್ ಆದಾಗ ನಾವು ತನಿಖೆ ಮಾಡಿ ಅಂತ ಆಗ್ರಹ ಮಾಡಿದ್ವಿ, ಕೇಂದ್ರ ಒಪ್ಪಲಿಲ್ಲ. ಬಳಿಕ ತಪ್ಪೊಪ್ಪಿಕೊಂಡು ಸಿಬಿಐ ತನಿಖೆಗೆ ಒಪ್ಪಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕೇಸ್ ಇದೇ 18ಕ್ಕೆ ವಿಚಾರಣೆಯಿದೆ. ಏನು ತೀರ್ಮಾನ ಆಗುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ
Advertisement
ಕೇಂದ್ರ ನಿರ್ಧಾರ ಮಾಡಬೇಕು:
ನೀಟ್ ರದ್ದು ಮಾಡೋದು ಸಾಧ್ಯವಿಲ್ಲ. ನೀಟ್ ವ್ಯವಸ್ಥೆ ಸುಪ್ರೀಂ ಕೋರ್ಟ್ ಆದೇಶದಿಂದ ಆಗಿದೆ. ಕೇಂದ್ರ ಸರ್ಕಾರ ಇದನ್ನ ಕಾಯ್ದೆ ತಂದು ಮಾಡಿದೆ. ಇದನ್ನ ರದ್ದು ಮಾಡಲು ಸುಪ್ರೀಂ ಕೋರ್ಟ್ ಆದೇಶ ಮಾಡಬೇಕು. ಅಥವಾ ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು ಎನ್ನುವ ಮೂಲಕ ನೀಟ್ ವ್ಯವಸ್ಥೆ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: Assembly Session: ಪರಿಷತ್‌ನಲ್ಲಿ ವಾಲ್ಮೀಕಿ ನಿಗಮ ಹಗರಣದ ಗದ್ದಲ; ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಬಿಗಿಪಟ್ಟು!
ಉತ್ತರ ನೀಡುವ ವೇಳೆ, ಕೇಂದ್ರದ ಮೇಲೆ ಸಚಿವ ಶರಣು ಪ್ರಕಾಶ್ ಪಾಟೀಲ್ ಆರೋಪ ಮಾಡಿದ್ರು. ಕೇಂದ್ರದ ಮೇಲೆ ಆರೋಪ ಮಾಡಿದ್ದಕ್ಕೆ ಬಿಜೆಪಿ ಸದಸ್ಯ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಸದನದಲ್ಲಿ ಗದ್ದಲ ಗಲಾಟೆ ಆಯ್ತು. ನೀಟ್ ಪರೀಕ್ಷೆಯಲ್ಲಿ ಮಕ್ಕಳ ಭವಿಷ್ಯ ಹಾಳು ಮಾಡಿದ್ದು ಕೇಂದ್ರ ಸರ್ಕಾರ ಎಂದ ಕಾಂಗ್ರೆಸ್ ಸದಸ್ಯರು. ಇದಕ್ಕೆ ಸಿಇಟಿಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೊಟ್ಟು ನೀವು ಹಾಳು ಮಾಡಿದ್ದು ಅಂತ ಬಿಜೆಪಿ ಸದಸ್ಯರು ಕಿಡಿಕಾರಿದರು. ಸದನದಲ್ಲಿ ಗದ್ದಲ ಗಲಾಟೆ ಉಂಟಾಯ್ತು. ಬಳಿಕ ಮಧ್ಯೆ ಪ್ರವೇಶ ಮಾಡಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡಿದ ಉಪ ಸಭಾಪತಿಗಳು ಗದ್ದಲಕ್ಕೆ ಬ್ರೇಕ್ ಹಾಕಿದ್ರು. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ