– ನಾವು ಕಾಂಗ್ರೆಸ್ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ
– ಎದುರಾಳಿ ಸಿ.ಬಿ. ಸುರೇಶ್ ಬಾಬು ತನ್ನ ಸರಿಸಮಾನನಲ್ಲ
– ಎದುರಾಳಿ ಸಿ.ಬಿ. ಸುರೇಶ್ ಬಾಬು ತನ್ನ ಸರಿಸಮಾನನಲ್ಲ
ತುಮಕೂರು: ನಾವು ರಾಜ್ಯದಲ್ಲಿ ಮತ್ತೇ ಬಿಜೆಪಿ (BJP) ಸರ್ಕಾರ ತರಲೇಬೇಕು. ನಾವೆಲ್ಲ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ. ಸರ್ಕಾರದ ವಿರುದ್ಧ ಮಾತನಾಡಿದಾಗ ನಾವೇ ಜಿಜ್ಞಾಸೆಗೆ ಒಳಗಾಗುತಿದ್ದೇವೆ. ನೀವೇನು ಎಂದು ನಾವು ವಾಪಸ್ ಕೇಳುತ್ತಿಲ್ಲ. ವಿರುದ್ಧ ಮಾತನಾಡಿದವರಿಗೆ ನಾವು ಮರು ಪ್ರಶ್ನೆ ಹಾಕಲ್ಲ. ನಾವು ಕಾಂಗ್ರೆಸ್ನವರ (Congress) ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ ಎಂದು ತಮ್ಮ ಪಕ್ಷದ ದೌರ್ಬಲ್ಯವನ್ನು ಸಚಿವ ಮಾಧುಸ್ವಾಮಿ (Madhuswamy) ಹೊರಹಾಕಿದ್ದಾರೆ.
Advertisement
ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ತಮ್ಮ ಪಕ್ಷದ ದೌರ್ಬಲ್ಯವನ್ನು ಮಾಧುಸ್ವಾಮಿ ಹೇಳಿಕೊಂಡಿದ್ದಾರೆ. ನಾವು ಮತ್ತೇ ಸರ್ಕಾರ ತರಲೇ ಬೇಕು. ನಾವೆಲ್ಲ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ. ಯಾರೋ ಬಾಯಿಗೆ ಬಂದಹಾಗೆ ಸರ್ಕಾರದ ವಿರುದ್ಧ ಮಾತನಾಡಿದಾಗ ನಾವೇ ಜಿಜ್ಞಾಸೆಗೆ ಒಳಗಾಗುತಿದ್ದೇವೆ. ನೀವೇನು ಎಂದು ನಾವು ವಾಪಸ್ ಕೇಳುತ್ತಿಲ್ಲ. ವಿರುದ್ಧ ಮಾತನಾಡಿದವರಿಗೆ ಮರು ಪ್ರಶ್ನೆ ಹಾಕಲ್ಲ. ನಾವು ಕಾಂಗ್ರೆಸ್ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ. ನಾವು ಗಟ್ಟಿ ಧ್ವನಿಯಲ್ಲಿ ನಮ್ಮ ಸಾಧನೆಯನ್ನು ಹೇಳಿಕೊಳ್ಳಬೇಕಾಗಿದೆ. ಆಗ ಅವರು ಬಾಯಿ ಮುಚ್ಚಿಕೊಳ್ತಾರೆ. ವಿರೋಧಿಗಳನ್ನು ಆಡೋಕೆ ಬಿಟ್ಟರೆ ಅವರು ಆಡ್ತಾನೆ ಇರುತ್ತಾರೆ. ಅಮಾಯಕ ಜನರಿಗೆ ವಿರೋಧಿಗಳು ಹೇಳೋದೆ ಸತ್ಯ ಎನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ
Advertisement
Advertisement
ಕೋರ್ಟ್ನಲ್ಲಿ ಎದುರು ಪಾರ್ಟಿ ವಿಚಾರಣೆಗೆ ಹಾಜರಾಗದೇ ಇದ್ರೆ ಇನ್ನೊಂದು ಪಾರ್ಟಿ ಪರ ಆದೇಶ ಆಗುತ್ತದೆ. ನಮ್ಮ ಪಕ್ಷದಲ್ಲಿ ಎಕ್ಸ್ ಪಾರ್ಟಿ ಡಿಸಿಷನ್ ಆಗಬಾರದು. ಹಗಲು ಕಳ್ಳರು, ಬೆಳಗ್ಗೆ ಕನ್ನ ಹಾಕಿದವರು ರಾತ್ರಿ ಕಳ್ಳನ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನವರೇ ಹಗಲು ಗಳ್ಳರು ಇವರು ನಮ್ಮ ಸುದ್ದಿ ಮಾತಾಡೋ ಸ್ಥಿತಿ ನಿರ್ಮಾಣ ಆಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ ಅಭಿವೃದ್ಧಿ ಪದದ ಕಾಗುಣಿತ ಗೊತ್ತಿಲ್ಲದ ವ್ಯಕ್ತಿ ನನ್ನ ಎದುರಾಳಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಹೊನ್ನಾ ನಾಯಕ ಮಾತಿಗೆ ತೀವ್ರ ಅಸಮಾಧಾನ- ಸಭೆ ಮಧ್ಯದಲ್ಲೇ ಹೊರಟು ಹೋದ ಶಾಸಕ
Advertisement
ಹಾಗಾಗಿ ನಾನು ಸಿದ್ದರಾಮಯ್ಯನವರ (Siddaramaiah) ಬಳಿ ಕೇಳಿದ್ದೇನೆ. ನಿವೇ ಚಿಕ್ಕನಾಯಕನಹಳ್ಳಿಯಿಂದ ಬಂದು ಸ್ಪರ್ಧೆ ಮಾಡಿ ಎಂದು ಆಗ ಸಮಬಲದ ಹೋರಾಟ ನಡೆಯುತ್ತದೆ. ಇಬ್ಬರೂ ಸೆಣಸಾಡಲು ಗೌರವ ಇರುತ್ತದೆ. ಇಬ್ಬರು ಸರಿಯಾಗಿ ಕುಸ್ತಿ ಆಡಬಹುದು. ಏನೂ ಗೊತ್ತಿಲ್ಲದವರ ಜೊತೆ ನಾನು ಸ್ಪರ್ಧೆ ಮಾಡೋಕೆ ನಿಂತಿದ್ದು ಯಾವ ಜನ್ಮದ ಪಾಪನೋ ಇಂತಹ ಕೆಟ್ಟ ಸ್ಥಿತಿ ನನಗೆ ಬರಬಾರದಿತ್ತು. ಎದುರಾಳಿ ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ತನ್ನ ಸರಿಸಮಾನನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜೆಡಿಎಸ್ (JDS) ವಿರುದ್ಧವೂ ಗುಡುಗಿದ ಮಾಧುಸ್ವಾಮಿ, ದೇವೇಗೌಡರು (H.D DeveGowda) ತುಮಕೂರಿಗೆ ಹೇಮಾವತಿ ನೀರನ್ನು ಕೊಡದೇ ಮೋಸ ಮಾಡಿದವರು. ನಾನು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಹೇಳಿಕೆಯ ಹಳೆಯ ಪೇಪರ್ ಕಟ್ಟಿಂಗ್ ತೋರಿಸಿದ್ದೆ. ಹಾಗಾಗಿಯೇ ಜಿಲ್ಲೆಯ ಜನರು ದೇವೇಗೌಡರನ್ನು ಸೋಲಿಸಿದರು. ಇಷ್ಟೆಲ್ಲಾ ಮಾಡಿಯೂ ಕುಮಾರಸ್ವಾಮಿಯವರು ಚಿಕ್ಕನಾಯಕನಹಳ್ಳಿಗೆ ಟೂರ್ ಹಾಕ್ತಾರೆ. ಮಾನ ಮರ್ಯಾದೆ ಇದ್ದವರು ಯಾರಾದರೂ ಚಿಕ್ಕನಾಯಕನಹಳ್ಳಿಗೆ ಬರಬಹುದಾ? ಇಲ್ಲಿಗೆ ಬಂದು ನನ್ನ ವಿರುದ್ಧ ಮಾತನಾಡುತ್ತಾರೆ. ಪಂಚರತ್ನ ಯಾತ್ರೆಯಲ್ಲಿ ನನ್ನ ವಿರುದ್ಧ ಭಾಷಣ ಮಾಡುತ್ತಾರೆ. ತಾಲೂಕು ಅಭಿವೃದ್ಧಿ ಆಗಿಲ್ಲ ಅಂತೆ, ನಾನು ಅಭಿವೃದ್ಧಿ ಆಗಿದ್ದೇನೆ ಅಂತೆ. ನಮ್ಮದು ಇವ್ರಂಗೆ ದೋಚಿದ್ದು ಬಾಚಿದ್ದು ಪ್ರಕರಣಗಳಿಲ್ಲ. ಅಪ್ಪ, ಮಕ್ಕಳು, ಮೊಮ್ಮಕ್ಕಳು ಎಲ್ಲಾ ದೋಚೋಕೆ ಶುರುಮಾಡಿದವರು ಚಿಕ್ಕನಾಯಕನಹಳ್ಳಿಗೆ ಬಂದು ಭಾಷಣ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k