– ಕ್ಷಮೆಯಾಚನೆಗೆ ಖರ್ಗೆ, ವಿಪಕ್ಷಗಳ ನಾಯಕರ ಬಿಗಿಪಟ್ಟು
ನವದೆಹಲಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ಹೇಳಿಕೆ ನೀಡಿ ಕೇಂದ್ರ ಸಚಿವ ಜೆ.ಪಿ.ನಡ್ಡಾ (J.P.Nadda) ಟೀಕೆಗೆ ಗುರಿಯಾಗಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡುವಾಗ ಜೆ.ಪಿ.ನಡ್ಡಾ ಅವರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದರು. ಈ ಹೇಳಿಕೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರ ನಡುವಿನ ವಾಗ್ವಾದಕ್ಕೆ ಕಾರಣವಾಯಿತು. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಖರ್ಗೆ ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಡ್ಡಾ ಎದ್ದುನಿಂತು, ಖರ್ಗೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ಹೇಳಿಕೆ ನೀಡಿದರು.
ನಡ್ಡಾ ಹೇಳಿಕೆಗೆ ಖರ್ಗೆ ಮತ್ತು ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ನಾಚಿಕೆಗೇಡಿನ ಹೇಳಿಕೆ. ಕೂಡಲೇ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ