ಕೊರೊನಾದಿಂದ ತಮ್ಮ ಮದುವೆಯನ್ನೇ ರದ್ದುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ

ವೆಲ್ಲಿಂಗ್ಟನ್: ಕೊರೊನಾ ಸೋಂಕಿನ ಕಠಿಣ ನಿಯಮ ಪಾಲನೆಗಾಗಿ ನ್ಯೂಜಿಲೆಂಡ್ ಪ್ರಧಾನಿ ಸ್ವಂತ ಮದುವೆಯನ್ನೇ ರದ್ದುಗೊಳಿಸುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.
ನ್ಯೂಜಿಲೆಂಡ್‍ನ ಪ್ರಧಾನಿ ಜೆಸಿಂದಾ ಆರ್ಡೆನ್ ಅವರು ದೀರ್ಘಕಾಲದ ಜೊತೆಗಾರ ಕ್ಲಾರ್ಕ್ ಗೆಫಾರ್ಡ್ ಜೊತೆ ಆರ್ಡೆನ್ ಜೊತೆಗೆ ಮದುವೆ ನಿಶ್ಚಯವಾಗಿತ್ತು. ಈ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. ಆದರೆ ದಿನಾಂಕವನ್ನು ಘೋಷಿಸಲಾಗಿರಲಿಲ್ಲ. ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜೆಸಿಂದಾ ಆರ್ಡೆನ್ ಅವರು ಸ್ವಂತ ಮದುವೆಯನ್ನೇ ರದ್ದು ಗೊಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಮತ್ತೊಂದು ಶಾಕ್ – ಗೋವಾ ಮಾಜಿ ಸಿಎಂ ಪರ್ಸೇಕರ್ ರಾಜೀನಾಮೆ
ಕೋವಿಡ್ ಕಠಿಣ ನಿಯಮಗಳ ಹೇರಿಕೆಯಿಂದ ತಮ್ಮ ಮದುವೆ ರದ್ದುಗೊಂಡ ಬಗೆಗಿನ ಪ್ರಶ್ನೆಗೆ ಜೀವನ ಎಂದರೆ ಹೀಗೆ ಇರುತ್ತದೆ. ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ ಎಂದು ಜೆಸಿಂದಾ ಉತ್ತರಿಸಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ
ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ನ್ಯೂಜಿಲೆಂಡ್ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳು. ಅದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರೀತಿ ಪಾತ್ರರ ಜೊತೆಗೆ ಇರಲಾಗದೆ ಇರುವ ಸ್ಥಿತಿ ಕರುಳು ಹಿಂಡುವಂತದ್ದಾಗಿದೆ ಎಂದು ಸೋಂಕು ಹಬ್ಬಿರುವ ಕುರಿತಾಗಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿ, ರೋಡ್ ಶೋ ಗಳಿಗೆ ಜ.31ರ ವರೆಗೆ ನಿರ್ಬಂಧ
ನ್ಯೂಜಿಲೆಂಡ್‍ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ನ್ಯೂಜಿಲೆಂಡ್‍ನಲ್ಲಿ ಇದುವರೆಗೆ 15,104 ಕೋವಿಡ್ 19 ಪ್ರಕರಣಗಳು ವರದಿ ಆಗಿವೆ. 52 ಮಂದಿ ಕೋವಿಡ್ ಕಾರಣದಿಂದ ಮೃತರಾಗಿದ್ದಾರೆ. ಕಳೆದ 2 ವರ್ಷಗಳಿಂದ ಗಡಿಯಲ್ಲಿ ಕಠಿಣ ನಿಯಮಗಳನ್ನು ಪಾಲಿಸಲಾಗುತ್ತಿದೆ.