ಪಣಜಿ: ಗೋವಾ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಗೋವಾದ ಪ್ರಮುಖ ವಿಧಾನಸಭಾ ಕ್ಷೇತ್ರ ವಾಸ್ಕೋದಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣಾ ಸಾಲ್ಕರ್ ಪರವಾಗಿ ಅವರು ಮತಯಾಚನೆ ಮಾಡಿದರು.
ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ
ಗೋವಾ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಚಾರಾರ್ಥವಾಗಿ ಇಂದು ದಕ್ಷಿಣ ಗೋವಾ ಜಿಲ್ಲೆಯ ಫತ್ರೋಡಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ಶ್ರೀ ದಾಮೋದರ ನಾಯ್ಕ್ ಅವರ ಪರವಾಗಿ ಮತಯಾಚಿಸಲಾಯಿತು.
#Vote4BJP | #ಗೋವಾ | #Goa | @BJP4Goa | @BJP4India pic.twitter.com/x9DesQEPyb
— Jagadish Shettar (@JagadishShettar) January 21, 2022
ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಮುಂದೆಯೂ ಗೋವಾ ಕನ್ನಡಿಗರ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಬಿಜಿಪಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಶೆಟ್ಟರ್ ಮತದಾರರ ಮನವೊಲಿಸುತ್ತಿದ್ದಾರೆ. ಮತದಾರರು ಶೆಟ್ಟರ್ ಪ್ರಚಾರದಲ್ಲಿ ಉತ್ತಮ ಸ್ಪಂದನೆ ತೋರುತ್ತಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ
ಈ ಸಂದರ್ಭದಲ್ಲಿ ವಾಸ್ಕೋ ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ನಾಯ್ಕ್, ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಾಕಾಯಿ ಉಪಸ್ಥಿತರಿದ್ದರು.