Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಾಮುಲು ಇದ್ದಕ್ಕಿದ್ದಂತೆ ಸೈಲೆಂಟ್ ಆಗಿದ್ದು ಏಕೆ – ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶ್ರೀರಾಮುಲು ಇದ್ದಕ್ಕಿದ್ದಂತೆ ಸೈಲೆಂಟ್ ಆಗಿದ್ದು ಏಕೆ – ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್

Belgaum

ಶ್ರೀರಾಮುಲು ಇದ್ದಕ್ಕಿದ್ದಂತೆ ಸೈಲೆಂಟ್ ಆಗಿದ್ದು ಏಕೆ – ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್

Public TV
Last updated: December 10, 2018 7:34 pm
Public TV
Share
2 Min Read
Jagadish Shettar 1
SHARE

ಬೆಳಗಾವಿ: ಬಿಜೆಪಿ ಶಾಸಕ ಶ್ರೀರಾಮುಲು ಅವರಿಗೆ ಆರೋಗ್ಯ ಸಮಸ್ಯೆಯಿದೆ. ಅನಾರೋಗ್ಯದಿಂದಾಗಿ ಅವರು ಈಗ ಮಾತನಾಡುತ್ತಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುವರ್ಣಸೌಧದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಎಂದಿಗೂ ರೈತರ ಪರ ಇರುತ್ತೆ. ಬಿಎಸ್ ಯಡಿಯೂರಪ್ಪ ಉಪಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ಇಂದು ಕುಮಾರಸ್ವಾಮಿ ಅವರು ಹಲವು ನಿಯಮಗಳನ್ನು ಹಾಕಿ ಸಾಲ ಮನ್ನಾ ಮಾಡಿದ್ದಾರೆ. 4 ಜನರಿಗೆ ಋಣ ಮುಕ್ತ ಪತ್ರ ಕೊಟ್ಟು ನಾಟಕ ಮಾಡಿದ್ದಾರೆ ಅಷ್ಟೇ ಎಂದರು.

ಇದೇ ವೇಳೆ ಶ್ರೀರಾಮುಲು ಅವರ ಕುರಿತ ಪ್ರಶ್ನೆಗೆ, ರಾಮುಲು ಅವರು ಅನಾರೋಗ್ಯದಿಂದ ಇರುವ ಕಾರಣ ಹೆಚ್ಚು ಮಾತನಾಡಲು ಆಗುತ್ತಿಲ್ಲ ಎಂದು ಉತ್ತರಿಸಿದರು.

BLG 1 1

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್ ಅವರು, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ತಮ್ಮ ತಪ್ಪುಗಳ್ನು ಒಪ್ಪಿಕೊಂಡಿದ್ದಾರೆ. ಲಿಂಗಾಯತ ಧರ್ಮ ಒಡೆಯುವ ವಿಚಾರದಲ್ಲಿ ಸಚಿವ ಡಿಕೆ ಶಿವಕುಮಾರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕೂಡ ಈ ಬಗ್ಗೆ ಪಶ್ಚಾತ್ತಾಪ ಪಟ್ಟಿದ್ರು. ಅದ್ರೆ ಈ ಬಗ್ಗೆ ಪ್ರಧಾನಿ ಮೋದಿ ಅವರ ಮೇಲೆ ಬಾರ ಹಾಕಲು ಪ್ರಯತ್ನ ಪಟ್ಟಿದ್ದಾರೆ. ಇದನ್ನು ತಿಳಿದು ರಾಜಕೀಯಕ್ಕಾಗಿ ಧರ್ಮ ಮಾಡಲು ಹೋಗಿದ್ದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದು ಕರೆ ನೀಡಿದರು.

ಸಮ್ಮಿಶ್ರ ಸರ್ಕಾರ ಮಾಡುತ್ತಿರುವ ರೈತರ ಸಾಲಮನ್ನಾ ನಾಟಕ ಕೂಡ ಬಹಳ ದಿನ ನಡೆಯಲ್ಲ, ರೈತರ ಸಾಲಮನ್ನಾ ಆಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಬರದಿಂದ ಜನ ಕಂಗಾಲಾಗಿದ್ದು, ಹಲವು ಗ್ರಾಮಗಳಲ್ಲಿ ಕುಡಿಯಲು ನೀರು, ಸಾಕು ಪ್ರಾಣಿಗಳಿಗೆ ಮೇವು ಇಲ್ಲದೇ ಗುಳೆ ಹೋಗುತ್ತಿದ್ದಾರೆ. ಸರ್ಕಾರದ ಯಾವ ಅಧಿಕಾರಿ, ಸಚಿವವರು ಭೇಟಿ ನೀಡಿಲ್ಲ. ಲಾಟರಿ ಹೊಡೆದಂತೆ ಸಿಎಂ ಆಗಿರುವ ಸರ್ಕಾರ ಪತನ ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.

Jagadeesh Shettar

ಬಿಎಸ್‍ವೈ ಎಲ್ಲಿ ಮಲಗಿದ್ರು ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಕಿಡಿಕಾರಿದ ಶೆಟ್ಟರ್, ಇದು ಕುಮಾರಸ್ವಾಮಿ ಅಂಡ್ ಟೀಂನ ಸಂಸ್ಕೃತಿ ತೋರಿಸುತ್ತದೆ. ಹಿಂದೆ ರೈತ ಮಹಿಳೆಗೆ ಸಿಎಂ ಕೇಳಿದ್ರು, ಈಗ ಅದೇ ದಾರಿಯಲ್ಲಿ ಅವರ ಶಾಸಕರು ಮುಂದುವರಿಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:belagaviCM KumaraswamyhealthJagadish ShettarPublic TVsriramuluಆರೋಗ್ಯಜಗಗದೀಶ್ ಶೆಟ್ಟರ್ಪಬ್ಲಿಕ್ ಟಿವಿಬೆಳಗಾವಿಶ್ರೀರಾಮುಲುಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
33 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
44 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
53 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
1 hour ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?