ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ ಮಾಡಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Advertisement
ಸ್ಮಾರ್ಟ್ ಸಿಟಿ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ 9.2 ಕಿ.ಮೀ. ಉದ್ದದ ಹಸಿರು ಸಂಚಾರಿ ಪಥ, ( ಗ್ರೀನ್ ಮೋಬಿಲಿಟಿ ಕಾರಿಡಾರ್) ಕಾಮಗಾರಿಯು ದೇಶದ 100 ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೊದಲನೆಯದಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 7.2 ಕೋಟಿ ವೆಚ್ಚದಲ್ಲಿ 640 ಮೀಟರ್ ಉದ್ದದ ನಾಲಾ ಅಭಿವೃದ್ಧಿ ಹಾಗೂ ಸೈಕಲ್ ಪಾತ್ ನಿರ್ಮಾಣ ಮಾಡಲಾಗಿದೆ. ಮುಂದಿನ 15 ದಿನಗಳಲ್ಲಿ ಉದ್ಘಾಟನೆ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಲಾಗುತ್ತಿದೆ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್, ಹುಡುಗಿ ವಿಚಾರಕ್ಕೆ ಹತ್ಯೆ
Advertisement
Advertisement
ಹುಬ್ಬಳ್ಳಿಯ ಉಣಕಲ್ ನಾಲಾ ಹಿಂಭಾಗದ ಜಲಮಂಡಳಿ ಕಚೇರಿ, ಲಿಂಗರಾಜ ನಗರದ ಹತ್ತಿರ ಸ್ಮಾರ್ಟ್ ಸಿಟಿ ಯೋಜನೆಯ ಕೈಗೊಂಡಿರುವ ಹಸಿರುಪಥ (ಗ್ರೀನ್ ಮೋಬಿಲಿಟಿ) ನಿರ್ಮಾಣ ಕಾಮಗಾರಿಯನ್ನು ಫ್ರೆಂಚ್ ಅಭಿವೃದ್ಧಿ ಏಜೆನ್ಸಿಯ ನಿಯೋಗದ (AFD-Agence Franchise Development) ಸದಸ್ಯರೊಂದಿಗೆ ವೀಕ್ಷಿಸಿ ಮಾತನಾಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ರಸ್ತೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ. ಸ್ಮಾರ್ಟ್ ಸಿಟಿ ಆಗಲು ಹುಬ್ಬಳ್ಳಿ ಧಾರವಾಡ ದಾಪುಗಾಲು ಇಡುತ್ತಿದೆ ಎಂದರು.